ಉದ್ಯಾವರ: ಸರ್ಕಾರದ ವಿವಿಧ ಯೋಜನೆಗಳ ಸೌಲಭ್ಯಗಳನ್ನು ಪಡೆಯಲು ಅಗತ್ಯವಿರುವ ದಾಖಲೆಗಳಿಗೆ ಗ್ರಾಮೀಣ ಜನತೆ ನಗರ ಪ್ರದೇಶಕ್ಕೆ ಬರುವ ಅಗತ್ಯವಿರದೇ ತಮ್ಮ ಗ್ರಾಮದಲ್ಲಿಯೇ ಅತ್ಯಂತ ಸುಲಭವಾಗಿ ಸರ್ಕಾರಿ ಸೇವೆಗಳನ್ನು ಗ್ರಾಮ ಒನ್ ಕೇಂದ್ರಗಳ ಮೂಲಕ ಪಡೆಯಬಹುದು ಎಂದು ಮೀನುಗಾರಿಕೆ ,ಬಂದರು ಮತ್ತು ಒಳನಾಡು ಜಲಸಾರಿಗೆ ಇಲಾಖೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಅಂಗಾರ ಹೇಳಿದರು.
ಅವರು ಉದ್ಯಾವರ ಗ್ರಾಮ ಪಂಚಾಯತ್ ನಲ್ಲಿ ಗ್ರಾಮ ಒನ್ ಕೇಂದ್ರವನ್ನು ಉದ್ಘಾಟಿಸಿ ಮಾತನಾಡಿದರು.
ಗ್ರಾಮೀಣ ಜನತೆ ವಿವಿಧ ಸರಕಾರಿ ಸೌಲಭ್ಯಗಳನ್ನು ಪಡೆಯಲು ಅಗತ್ಯವಿದ್ದ ದಾಖಲೆಗಳಿಗಾಗಿ ದೂರದ ಊರುಗಳಿಂದ ಜಿಲ್ಲಾ ಮತ್ತು ತಾಲೂಕು ಕೇಂದ್ರಗಳಿಗೆ ಆಗಮಿಸಿ,ಸರದಿಯಲ್ಲಿ ನಿಂತು ದಾಖಲೆಗಳನ್ನು ಪಡೆಯಲು ಕಷ್ಟಪಡಬೇಕಿತ್ತು. ಇದನ್ನು ತಪ್ಪಿಸುವ ಉದ್ದೇಶದಿಂದ ಮುಖ್ಯಮಂತ್ರಿಗಳು ಗ್ರಾಮ ಒನ್ ಕೇಂದ್ರಗಳನ್ನು ರಾಜ್ಯದ ಎಲ್ಲಾ ಗ್ರಾಮ ಪಂಚಾಯತ್ ಗಳಲ್ಲಿ ಆರಂಭಿಸಲು ಸೂಚಿಸಿದ್ದು, ಅದರಂತೆ ಉಡುಪಿ ಜಿಲ್ಲೆಯಲ್ಲಿ 105 ಗ್ರಾಮಗಳಲ್ಲಿ ಈ ಕೇಂದ್ರಗಳನ್ನು ತೆರೆಯಲಾಗಿದೆ ಎಂದರು.
ಕಾರ್ಯಕ್ರಮದಲ್ಲಿ ಶಾಸಕ ಲಾಲಾಜಿ ಆರ್ ಮೆಂಡನ್, ಉದ್ಯಾವರ ಗ್ರಾ.ಪಂ. ಅಧ್ಯಕ್ಷ ರಾಧಾಕೃಷ್ಣ ಶ್ರೀಯಾನ್, ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ, ಜಿ.ಪಂ. ಸಿಇಓ ಡಾ.ನವೀನ್ ಭಟ್, ಎಸ್ಪಿ ವಿಷ್ಣುವರ್ಧನ್, ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು, ಉಡುಪಿ ತಹಸೀಲ್ದಾರ್ ಪ್ರದೀಪ್ ಕುರ್ಡೆಕರ್ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.
Kshetra Samachara
27/01/2022 03:06 pm