ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಉಡುಪಿ: ಸಂಭ್ರಮದ ಸ್ವಾತಂತ್ರ್ಯ ಅಮೃತ ಮಹೋತ್ಸವ; ಸಚಿವ ಎಸ್ ಅಂಗಾರ ಧ್ವಜಾರೋಹಣ

ಉಡುಪಿ: ಉಡುಪಿ ಜಿಲ್ಲಾಡಳಿತದಿಂದ ಸ್ವಾತಂತ್ರ್ಯ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಲಾಯಿತು.ಈ ಬಾರಿ ಸ್ವಾತಂತ್ರ್ಯ ಅಮೃತ ಮಹೋತ್ಸವವನ್ನು ಉಡುಪಿಯ ಅಜ್ಜರಕಾಡು ಮಹಾತ್ಮಾ ಗಾಂಧಿ ಕ್ರೀಡಾಂಗಣದಲ್ಲಿ ಹಮ್ಮಿಕೊಳ್ಳಲಾಗಿತ್ತು.ಉಡುಪಿ ಜಿಲ್ಲಾ ಉಸ್ರುವಾರಿ ಸಚಿವ ಎಸ್. ಅಂಗಾರ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ ಮಾಡಿದರು.

ಧ್ವಜಾರೋಹಣಕ್ಕೂ ಮುನ್ನ ಕ್ರೀಡಾಂಗಣದಲ್ಲಿ ರಾಷ್ಟ್ರಗೀತೆ ಮತ್ತು ನಾಡಗೀತೆ ಅನುರಣಿಸಿತು. ಬಳಿಕ ವಿವಿಧ ತಂಡಗಳಿಂದ ಆಕರ್ಷಕ ಪಥ ಸಂಚಲನ ನಡೆಯಿತು.ಕ್ರೀಡಾಂಗಣದಲ್ಕಿ 100 ಮೀಟರ್ ಉದ್ದದ ರಾಷ್ಟ್ರ ಧ್ವಜ ಪ್ರದರ್ಶನ ಎಲ್ಲರ ಮನಸೂರೆಗೊಂಡಿತು.ವಿವಿಧ ತಂಡಗಳಿಂದ ಉಸ್ತುವಾರಿ ಸಚಿವರು ಗೌರವ ವಂದನೆ ಸ್ವೀಕರಿಸಿದರು. ಕ್ರೀಡಾಂಗಣದಲ್ಕಿ ಅದ್ಧೂರಿ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದ್ದು, ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ಸಿದ್ದತೆಗಳು ನಡೆಯುತ್ತಿವೆ.

Edited By : Manjunath H D
Kshetra Samachara

Kshetra Samachara

15/08/2022 10:57 am

Cinque Terre

7.9 K

Cinque Terre

0

ಸಂಬಂಧಿತ ಸುದ್ದಿ