ವಿಟ್ಲ: ಪದ್ಮಶ್ರೀ ಪ್ರಶಸ್ತಿ ಆಯ್ಕೆಗೊಂಡಿದ್ದ ವಿಟ್ಲ ಸಮೀಪದ ಅಮೈ ಮಹಾಲಿಂಗ ನಾಯ್ಕ ಅವರು ಇಂದು ನವದೆಹಲಿಯಲ್ಲಿ ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದರು.
ತನ್ನ ಮನೆಯ ತೋಟದಲ್ಲಿ ನೀರಿಗಾಗಿ ಸುರಂಗ ತೋಡುವ ಮೂಲಕ ಖ್ಯಾತಿ ಪಡೆದಿದ್ದರು. ಇವರ ಸಾಧನೆ ಗುರುತಿಸಿ ಭಾರತ ಸರಕಾರ ಪದ್ಮಶ್ರೀ ಪ್ರಶಸ್ತಿಗೆ ಆಯ್ಕೆ ಮಾಡಿತ್ತು. ಅದರಂತೆ ಇಂದು ನವದೆಹಲಿಯಲ್ಲಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಪದ್ಮಶ್ರೀ ಪ್ರಶಸ್ತಿ ನೀಡಿ ಗೌರವಿಸಿದೆ. ಈ ಸಂದರ್ಭ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಮೊದಲಾದ ಗಣ್ಯರು ಉಪಸ್ಥಿತರಿದ್ದರು.
PublicNext
28/03/2022 07:42 pm