ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೈಂದೂರು: ಮನೆಮನೆಯಲ್ಲೂ ಯಕ್ಷಗಾನದ ಕಂಪು ಪಸರಿಸುವ ಚಿಕ್ಕಮೇಳಗಳು!

ವರದಿ: ರಹೀಂ ಉಜಿರೆ

ಬೈಂದೂರು: ಮಳೆಗಾಲದಲ್ಲಿ ಯಕ್ಷಗಾನ ಮೇಳಗಳ ತಿರುಗಾಟವಿರುವುದಿಲ್ಲ.ಅದರ ಜೊತೆಗೆ ಕೋವಿಡ್ ಮತ್ತು ಲಾಕ್ ಡೌನ್ ನಿಂದಾಗಿ ಒಂದೂವರೆ ವರ್ಷದಿಂದ ಕಲಾವಿದರ ಬದುಕು ಸಂಕಷ್ಟಕ್ಕೆ ಸಿಲುಕಿದೆ.ಹೀಗಾಗಿ ಯಕ್ಷಗಾನ ಕಲಾವಿದರು ಹೊಸದೊಂದು ಪ್ಲ್ಯಾನ್ ಮಾಡಿಕೊಂಡಿದ್ದಾರೆ ....ಏನದು?

ಮೇಳದ ಕಲಾವಿದರಿಗೆ ಮಳೆಗಾಲದಲ್ಲಿ ನೆರವಾಗುವುದೇ ಈ ಚಿಕ್ಕಮೇಳ. ಇದು ದೇವರ ಆರಾಧನೆಯೂ ಹೌದು. ಮನೆಮನೆಗೆ ಹೋಗಿ ಗೆಜ್ಜೆನಾದ ಸೇವೆಯ ಮೂಲಕ ಕಲಾವಿದರು ತಮ್ಮ ಬದುಕಿನ ನಿರ್ವಹಣೆ ಮಾಡಿಕೊಳ್ಳುತ್ತಾರೆ. ಹಿಂದಿನ ಕಾಲದಿಂದಲೂ ಮಳೆಗಾಲದಲ್ಲಿ ಚಿಕ್ಕ ಮೇಳಗಳು ತಿರುಗಾಟ ನಡೆಸುತ್ತಿವೆ.

ಕೇವಲ 4 ಅಥವಾ 5 ಜನ ಕಲಾವಿದರು ಮನೆಮನೆಗೆ ತೆರಳಿ ಅಲ್ಪ ಅವಧಿಯ ಯಕ್ಷಗಾನ ಸೇವೆ ಸಲ್ಲಿಸುತ್ತಾರೆ.

ಚಿಕ್ಕಮೇಳಗಳ ಮೂಲಕ ಮನೆ ಮಕ್ಕಳಿಗೆ ಯಕ್ಷಗಾನದ ಅರಿವು ಮೂಡಿಸುವ ಕಾರ್ಯವೂ ನಡೆಯುತ್ತವೆ. ಇದನ್ನು ಗೆಜ್ಜೆನಾದ ಸೇವೆ ಎಂದೂ ಕರೆಯುತ್ತಾರೆ.ಒಂದು ಊರಿನ ಹಲವು ಮನೆಗಳಿಗೆ ತೆರಳಿ ಚಿಕ್ಕ ಮೇಳ ಬರುವ ಸಮಯವನ್ನು ಮೊದಲೇ ತಿಳಿಸಲಾಗುತ್ತದೆ. ದಿನದಲ್ಲಿ ಸಂಜೆ 7ರಿಂದ ರಾತ್ರಿ 10ರ ತನಕ ಚಿಕ್ಕ ಮೇಳಗಳು ತಿರುಗಾಟ ನಡೆಸುತ್ತವೆ. ಮನೆಗೆ ಬಂದ ಕಲಾ ತಂಡವನ್ನು ಮನೆಯವರು ಸ್ವಾಗತಿಸುತ್ತಾರೆ. ಹೂ ಹಣ್ಣು ಅಕ್ಕಿ ತೆಂಗಿನಕಾಯಿ ಮತ್ತು ದೇವರನ್ನು ಇಟ್ಟು ಅಲ್ಲಿ ಪ್ರಾರ್ಥನೆ ಸಲ್ಲಿಸಿ, ಯಾವುದಾದರೂ ಒಂದು ಪ್ರಸಂಗದ ಚಿಕ್ಕ ಭಾಗವನ್ನು ಮನೆಯಲ್ಲಿ ಪ್ರದರ್ಶಿಸುತ್ತಾರೆ.

ಒಂದು ಸ್ತ್ರೀ ವೇಷ ಇನ್ನೊಂದು ಪುರುಷ ವೇಷಧಾರಿ ಮತ್ತು ಹಿಮ್ಮೇಳದ ಇಬ್ಬರು ಕಲಾವಿದರು ತಂಡದಲ್ಲಿರುತ್ತಾರೆ. ಪ್ರತಿ ಮನೆಯಲ್ಲಿ ಕಲಾವಿದರಿಗೆ ಕಾಣಿಕೆಯನ್ನೂ ನೀಡಲಾಗುತ್ತದೆ.

ಕಲಾವಿದರಿಗೆ ಜೀವನ ನಿರ್ವಹಣೆಯ ಜೊತೆಗೆ ಯಕ್ಷಗಾನದ ಕಂಪನ್ನು ಮನೆಮನೆಗೆ ಪಸರಿಸಲು ಈ ಚಿಕ್ಕಮೇಳಗಳು ಬಹಳ ಸಹಕಾರಿಯಾಗಿವೆ.

Edited By : Nagesh Gaonkar
Kshetra Samachara

Kshetra Samachara

11/09/2021 07:03 pm

Cinque Terre

12.44 K

Cinque Terre

3

ಸಂಬಂಧಿತ ಸುದ್ದಿ