ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮಂಗಳೂರು: "ಮೇಲ್ತೆನೆ" ಯಿಂದ ಬ್ಯಾರಿ ಭಾಷಾ ದಿನಾಚರಣೆ

ಮಂಗಳೂರು: ಬ್ಯಾರಿ ಲೇಖಕರು-ಕಲಾವಿದರ ಕೂಟ (ಮೇಲ್ತೆನೆ) ವತಿಯಿಂದ ಬ್ಯಾರಿ ಭಾಷಾ ದಿನಾಚರಣೆ ಶನಿವಾರ ನಡೆಯಿತು.

ದೇರಳಕಟ್ಟೆಯ ನಾಟೆಕಲ್ ಸಮೀಪದ ವಿಜಯನಗರ ಬಳಿಯ ಮೈದಾನದಲ್ಲಿ ನಡೆದ ಕಾರ್ಯಕ್ರಮವನ್ನು ಮೇಲ್ತೆನೆ ಸದಸ್ಯ, ಪತ್ರಕರ್ತ ಹಂಝ ಮಲಾರ್ ಉದ್ಘಾಟಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಉಳ್ಳಾಲ ಅಳೇಕಲ‌ ಮದನಿ ಪಿಯು ಕಾಲೇಜಿನ ಪ್ರಾಂಶುಪಾಲರು ಹಾಗೂ ಮೇಲ್ತೆನೆಯ ಅಧ್ಯಕ್ಷ ಇಸ್ಮಾಯಿಲ್ ಟಿ.‌ ವಹಿಸಿದ್ದರು.

ಉಪಾಧ್ಯಕ್ಷ ಮುಹಮ್ಮದ್ ಬಾಷಾ ನಾಟೆಕಲ್, ಪ್ರಧಾನ ಕಾರ್ಯದರ್ಶಿ ಮನ್ಸೂರ್ ಅಹ್ಮದ್ ಸಾಮಣಿಗೆ, ಸದಸ್ಯರಾದ ಬಶೀರ್ ಅಹ್ಮದ್, ರಿಯಾಝ್ ಮಂಗಳೂರು, ಆಸೀಫ್ ಬಬ್ಬುಕಟ್ಟೆ ಉಪಸ್ಥಿತರಿದ್ದರು.

Edited By :
Kshetra Samachara

Kshetra Samachara

03/10/2020 01:03 pm

Cinque Terre

10.43 K

Cinque Terre

0

ಸಂಬಂಧಿತ ಸುದ್ದಿ