ಮಂಗಳೂರು: ವಿಶ್ವ ಪ್ರವಾಸೋದ್ಯಮದ ದಿನದ ಅಂಗವಾಗಿ ದಕ್ಷಿಣ ಕನ್ನಡ ಜಿಲ್ಲಾಡಳಿತ, ಪ್ರವಾಸೋದ್ಯಮ ಇಲಾಖೆ ಹಾಗೂ ಮಂಗಳೂರು ಮಹಾನಗರ ಪಾಲಿಕೆಯ ವತಿಯಿಂದ ಮಂಗಳೂರು ನಗರದ ತಣ್ಣೀರುಬಾವಿ ಕಡಲ ತೀರದಲ್ಲಿ ‘ಸ್ವಚ್ಛತಾ ಪಕ್ವಾಡ-2020’ ಕಾರ್ಯಕ್ರಮ ನಡೆಯಿತು.
ಜಿಲ್ಲಾಧಿಕಾರಿ ಕಸ ಹೆಕ್ಕುವ ಮೂಲಕ ಸ್ವಚ್ಛತಾ ಕಾರ್ಯಕ್ಕೆ ಚಾಲನೆ ನೀಡಿದರು. ಜೊತೆಗೆ ಪ್ರವಾಸೋದ್ಯಮ ಇಲಾಖೆಯ ಮೂಲಕ ನಿರ್ಮಿಸಿದ ದಾರಿಸೂಚಕ ಫಲಕವನ್ನು ಜಿಲ್ಲಾಧಿಕಾರಿ ಉದ್ಘಾಟಿಸಿದರು. ನೀರಲ್ಲಿ ಬಿದ್ದವರನ್ನು ರಕ್ಷಿಸುವ ಪ್ರಾತ್ಯಕ್ಷಿಕೆ ಈ ಸಂದರ್ಭ ನಡೆಯಿತು.
Kshetra Samachara
27/09/2020 04:47 pm