ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮುಲ್ಕಿ: ಸ್ವಚ್ಛ ಭಾರತ್: "ಮಹಾತ್ಮ ಗಾಂಧೀಜಿ ಕನಸು ಮೋದಿಜಿಯಿಂದ ಸಾಕಾರ"

ಮುಲ್ಕಿ: ಮಹಾತ್ಮ ಗಾಂಧೀಜಿಯವರ ಕನಸನ್ನು ನಿಜ ಅರ್ಥದಲ್ಲಿ ನನಸು ಮಾಡಲು ಶ್ರಮಿಸಿದವರು ನಮ್ಮ ಪ್ರಧಾನಿ ನರೇಂದ್ರ ಮೋದಿಜಿ ಎಂದು ಮಂಗಳೂರು ನಗರ ಉತ್ತರ ಶಾಸಕ ಡಾ.ವೈ. ಭರತ್ ಶೆಟ್ಟಿ ಹೇಳಿದರು.

ಅವರು ಗುರುಪುರ ಜಂಕ್ಷನ್ ನಲ್ಲಿ ಮಂಗಳೂರು ನಗರ ಉತ್ತರ ಯುವಮೋರ್ಚಾ ವತಿಯಿಂದ ನಡೆದ ಸ್ವಚ್ಛತಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.

ಮಹಾತ್ಮ ಗಾಂಧೀಜಿ, ಈ ದೇಶ ಸ್ವಚ್ಛವಾಗಿರಬೇಕು ಎಂದು ಕನಸು ಕಂಡಿದ್ದರು. ಸ್ವಾತಂತ್ರ್ಯದ ನಂತರ ಬಂದ ಸರಕಾರಗಳು ಆ ಬಗ್ಗೆ ಗಮನ ಕೊಡಲಿಲ್ಲ. ಆದರೆ, ಮೋದಿಜಿಯವರು ಪ್ರಧಾನಿ ಆದ ನಂತರ ಸ್ವಚ್ಛ ಭಾರತ್ ಯೋಜನೆ ಮೂಲಕ ಜನರಲ್ಲಿ ಜಾಗೃತಿ ಮೂಡಿಸಿದರು. ಅನಂತರ ನಮ್ಮ ದೇಶದಲ್ಲಿ ನಾಗರಿಕರು ಈ ಬಗ್ಗೆ ಹೆಚ್ಚೆಚ್ಚು ಆಸಕ್ತಿ ಬೆಳೆಸಿ ಸ್ವಚ್ಛ ಪರಿಸರ ಉಳಿಸುವಲ್ಲಿ ಗಣನೀಯ ಕೆಲಸ ಮಾಡುತ್ತಿದ್ದಾರೆ ಎಂದರು.

ಬಿಜೆಪಿ ಜಿಲ್ಲಾ ಅಧ್ಯಕ್ಷ ಸುದರ್ಶನ ಮೂಡುಬಿದಿರೆ, ಉತ್ತರ ಮಂಡಲ ಅಧ್ಯಕ್ಷ ತಿಲಕರಾಜ್ ಕೃಷ್ಣಾಪುರ, ಪ್ರಧಾನ ಕಾರ್ಯದರ್ಶಿ ರಾಜೇಶ್ ಕೊಟ್ಟಾರಿ, ಸಂದೀಪ್ ಪಚ್ಚನಾಡಿ, ಯುವಮೋರ್ಚಾ ಉತ್ತರ ಮಂಡಲ ಅಧ್ಯಕ್ಷ ಭರತರಾಜ್ ಕೃಷ್ಣಾಪುರ, ಪ್ರಧಾನ ಕಾರ್ಯದರ್ಶಿಗಳಾದ ಸಂಜಿತ್,ಸಂದೇಶ್, ಮಹಾಶಕ್ತಿ ಕೇಂದ್ರ ಅಧ್ಯಕ್ಷ ಸೋಹನ್ ಅತಿಕಾರಿ, ಪ್ರಧಾನ ಕಾರ್ಯದರ್ಶಿ ರಾಜೇಶ್ ಗುರುಪುರ ಹಾಗೂ ಪಕ್ಷದ ವಿವಿಧ ಜವಾಬ್ದಾರಿ ಹೊಂದಿರುವ ಪ್ರಮುಖರು ಉಪಸ್ಥಿತರಿದ್ದರು.

Edited By : Nagesh Gaonkar
Kshetra Samachara

Kshetra Samachara

02/10/2020 11:56 am

Cinque Terre

14.23 K

Cinque Terre

0

ಸಂಬಂಧಿತ ಸುದ್ದಿ