ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮಲ್ಪೆ: "ಪ್ರವಾಸೋದ್ಯಮ ಅವಕಾಶ ಪೂರ್ಣ ಪ್ರಮಾಣದಲ್ಲಿ ಬಳಕೆ ಮಾಡೋಣ"

ಮಲ್ಪೆ: ಜಿಲ್ಲಾಡಳಿತ, ಪ್ರವಾಸೋದ್ಯಮ ಇಲಾಖೆ, ಮಲ್ಪೆ ಅಭಿವೃದ್ಧಿ ಸಮಿತಿ, ನೆಹರು ಯುವ ಕೇಂದ್ರ ಮತ್ತು ಕರಾವಳಿ ಪ್ರವಾಸೋದ್ಯಮ ಸಂಘಟನೆ ಮತ್ತು ಭಾರತ್ ಸ್ಕೌಟ್ಸ್ ಆ್ಯಂಡ್ ಗೈಡ್ಸ್ ಸಹಯೋಗದಲ್ಲಿ ವಿಶ್ವ ಪ್ರವಾಸೋದ್ಯಮ ದಿನವನ್ನು ಮಲ್ಪೆ ಬೀಚ್ ನಲ್ಲಿ ಆಚರಿಸಲಾಯಿತು.

ಪ್ರವಾಸೋದ್ಯಮ ಹಾಗೂ ಗ್ರಾಮೀಣಾಭಿವೃದ್ಧಿ ಧ್ಯೇಯದಡಿ ನಡೆದ ಕಾರ್ಯಕ್ರಮದಲ್ಲಿ ಟ್ಯಾಪ್ಮಿ ಸಂಸ್ಥೆ ಪ್ರೊಫೆಸರ್ ಈಶ್ವರ್ ದಿಕ್ಸೂಚಿ ಭಾಷಣ ಮಾಡಿದರು.

ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಜಿಲ್ಲಾಧಿಕಾರಿ ಜಿ. ಜಗದೀಶ್, "ಉಡುಪಿ ಜಿಲ್ಲೆ ಪ್ರವಾಸೋದ್ಯಮಕ್ಕೆ ಹೇಳಿ ಮಾಡಿಸಿದ ಜಿಲ್ಲೆ. ಆದರೆ, ಇಲ್ಲಿನ ಪ್ರವಾಸೋದ್ಯಮದ ಅವಕಾಶ ನಾವು ಪೂರ್ಣ ಪ್ರಮಾಣದಲ್ಲಿ ಬಳಕೆ ಮಾಡಿಲ್ಲ. ಜಿಲ್ಲೆಗೆ ಬರುವ ಪ್ರವಾಸಿಗರಿಗೆ ಪ್ರವಾಸಿ ಸ್ಥಳಗಳಲ್ಲಿ ಉತ್ತಮ ಅನುಭವ ನೀಡುವಂತಾಗಬೇಕು. ಕೆಟ್ಟ‌ ಅನುಭವಗಳು ಪ್ರವಾಸಿಗರಿಗೆ ಅಗದಂತೆ ನಾವು ತಡೆಗಟ್ಟಬೇಕು" ಎಂದರು.

ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ರಾಘವೇಂದ್ರ ಕಿಣಿ,‌ ಜಿಪಂ ಸಿಇಒ ಪ್ರೀತಿ ಗೆಹ್ಲೋಟ್, ಕರಾವಳಿ ಪ್ರವಾಸೋದ್ಯಮ ಸಂಘಟನೆ ಅಧ್ಯಕ್ಷ ಮನೋಹರ್ ಶೆಟ್ಟಿ, ಇತರ ಜನಪ್ರತಿನಿಧಿಗಳು ಉಪಸ್ಥಿತರಿದ್ದರು.

Edited By : Nagesh Gaonkar
Kshetra Samachara

Kshetra Samachara

27/09/2020 01:42 pm

Cinque Terre

24.73 K

Cinque Terre

0