ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಉಡುಪಿ: ಡಾ.ಡಿ.ವೀರೇಂದ್ರ ಹೆಗ್ಗಡೆ ಸಮ್ಮುಖದಲ್ಲಿ ಜೂನ್ 28ಕ್ಕೆ ಬಾರ್ಕೂರಿನಲ್ಲಿ ಯಂತ್ರಶ್ರೀಗೆ ಚಾಲನೆ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ 20,000 ಹೆಕ್ಟೇರ್ ಪ್ರದೇಶದಲ್ಲಿ ಯಾಂತ್ರೀಕೃತ ಭತ್ತ ಬೇಸಾಯ ಯಂತ್ರಶ್ರೀ ಮತ್ತು ಹಡಿಲು ಭೂಮಿ ಪುನಶ್ಚೇತನ ಯೋಜನೆ ಅನುಷ್ಠಾನಗೊಳಿಸಲಾಗುತ್ತಿದೆ. ಜೂನ್ 28ರಂದು ಬೆಳಿಗ್ಗೆ 11 ಗಂಟೆಗೆ ಬ್ರಹ್ಮಾವರ ತಾಲೂಕಿನ ಬಾರ್ಕೂರಿನ ಶ್ರೀನಿವಾಸ ಉಡುಪ ಅವರ ಕೃಷಿ ಪ್ರದೇಶದಲ್ಲಿ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಗುವುದು ಎಂದು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಪ್ರಾದೇಶಿಕ ನಿರ್ದೇಶಕ ವಸಂತ್ ಸಾಲ್ಯಾನ್ ಸುದ್ದಿಗೋಷ್ಠಿಯಲ್ಲಿ ಹೇಳಿದರು.

ಡಾ.ವೀರೇಂದ್ರ ಹೆಗ್ಗಡೆಯವರ ಸಮ್ಮುಖದಲ್ಲಿ, ಕೇಂದ್ರ ರಾಜ್ಯ ಕೃಷಿ ಮತ್ತು ರೈತ ಕಲ್ಯಾಣ ಸಚಿವೆ ಶೋಭಾ ಕರಂದ್ಲಾಜೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಕೊಟ ಶ್ರೀನಿವಾಸ್ ಪೂಜಾರಿ, ಕುಂದಾಪುರ ಶಾಸಕ ಹಾಲಾಡಿ ಶ್ರೀನಿವಾಸ್‌ ಶೆಟ್ಟಿ, ಉಡುಪಿ ಶಾಸಕ ಕೆ. ರಘುಪತಿ ಭಟ್, ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ ಉಪಸ್ಥಿತಿಯಲ್ಲಿ ಭತ್ತದ ಸಸಿಗಳನ್ನು ಯಂತ್ರದ ಸಹಾಯದಿಂದ ನಾಟಿ ಮಾಡಲಾಗುವುದು, ರೈತರಿಗೆ ಭತ್ತ ಯಾಂತ್ರೀಕರಣದ ಕೌಶಲವನ್ನು ತೋರಿಸಿಕೊಡಲು ಉಳುಮೆಯಿಂದ ಮೊದಲ್ಗೊಂಡು ಒಕ್ಕಣೆಯವರೆಗೆ ಬಳಕೆ ಮಾಡುವ ಮಾನವ ಚಾಲಿತ ಮತ್ತು ಸ್ವಯಂ ಚಾಲಿತ ಯಂತ್ರಗಳ ಪ್ರದರ್ಶನವನ್ನು ಹಮ್ಮಿಕೊಳ್ಳಲಾಗಿದೆ. ನುರಿತ ತಜ್ಞರು ಯಂತ್ರೋಪಕರಣಗಳ ಬಳಕೆಯ ಮಾಹಿತಿ ಮತ್ತು ಮಾರ್ಗದರ್ಶನ ನೀಡಲಿರುವರು.

ಹಸಿರೆಲೆ ಗೊಬ್ಬರ ಗಿಡ ತಯಾರಿ, ನರ್ಸರಿ ತಯಾರಿ ಮತ್ತು ಭತ್ತ ನಾಟಿ ಯಂತ್ರದ ಪ್ರಾತ್ಯಕ್ಷಿಕೆಯನ್ನು ಹಮ್ಮಿಕೊಳ್ಳಲಾಗಿದೆ. ಯಂತ್ರಶ್ರೀ ಯೋಜನೆಯಲ್ಲಿ ಸಾಧನೆ ಮಾಡಿದ ಸಾಧಕರಿಗೆ ಪ್ರಮಾಣಪತ್ರ ವಿತರಿಸಲಾಗುವುದು ಎಂದು ಅವರು ಮಾಹಿತಿ ನೀಡಿದರು.

Edited By :
Kshetra Samachara

Kshetra Samachara

27/06/2022 07:24 pm

Cinque Terre

18.14 K

Cinque Terre

0

ಸಂಬಂಧಿತ ಸುದ್ದಿ