ಕಾಪು: ಉಡುಪಿ ಜಿಲ್ಲಾ ಮುಸ್ಲಿಮ್ ಒಕ್ಕೂಟ ಕಾಪು ತಾಲೂಕು ವತಿಯಿಂದ ಮಾನವತೆಯ ಪ್ರತಿಪಾದಕರಾದ ಪ್ರವಾದಿ ಮುಹಮ್ಮದ್ (ಸ)ರ ಜೀವನ ಮತ್ತು ಸಂದೇಶ ಕಾರ್ಯಕ್ರಮ ಶನಿವಾರ ಕಾಪುವಿನ ಹೊಟೇಲ್ ಕೆ.1 ಸಭಾಂಗಣದಲ್ಲಿ ಜರುಗಿತು.
ಕಾಪು ಕೊಂಬಗುಡ್ಡೆ ಜಾಮಿಯಾ ಮಸ್ಜಿದ್ ಜದೀದ್ ಕಲಾನ್ ಇಲ್ಲಿಯ ಧರ್ಮಗುರು, ಮೌಲಾನ ಮಹಮ್ಮದ್ ಪರ್ವೇಝ್ ಆಲಂ ಕುರಾನ್ ಪಠಿಸಿ ಕಾರ್ಯಕ್ರಮ ಪ್ರಾರಂಭಿಸಿದರು.ಮುಸ್ಲಿಂ ಒಕ್ಕೂಟದ ಜಿಲ್ಲಾ ಸಮಿತಿ ಸದಸ್ಯ ಮಹಮ್ಮದ್ ಇದ್ರೀಸ್,ಕಲ್ಯಾಣಪುರ ಮಿಲಾಗ್ರಿಸ್ ಕಾಲೇಜಿನ ಪ್ರಾಂಶುಪಾಲ ಡಾ.ವಿನ್ಸೆಂಟ್ ಆಳ್ವ, ಉಳಿಯರಗೋಳಿ ದಂಡತೀರ್ಥ ಪ.ಪೂ. ಕಾಲೇಜಿನ ನಿಕಟಪೂರ್ವ ಪ್ರಾಂಶುಪಾಲ ನೀಲಾನಂದ ನಾಯ್ಕ್ ಅವರು ಪ್ರವಾದಿ ಮುಹಮ್ಮದ್(ಸ)ರ ಜೀವನ ಶೈಲಿ ಮತ್ತು ಸಂದೇಶದ ಕುರಿತು ಮಾಹಿತಿ ನೀಡಿದರು.
ಮಂಗಳೂರು ಶಾಂತಿ ಪ್ರಕಾಶನದ ವ್ಯವಸ್ಥಾಪಕ ಮುಹಮ್ಮದ್ ಕುಂಞಿ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ನೂರಾರು ಜನ ಭಾಗವಹಿಸಿದ್ದರು.ಉಡುಪಿ ಜಲ್ಲಾ ಮುಸ್ಲಿಂ ಒಕ್ಕೂಟದ ಕಾಪು ತಾಲೂಕು ಅಧ್ಯಕ್ಷ ಶಬೀ ಅಹಮದ್ ಖಾಝಿ ಸ್ವಾಗತಿಸಿದರು.
ಉಡುಪಿ ಜಿಲ್ಲಾ ಮುಸ್ಲಿಂ ಒಕ್ಕೂಟದ ಕಾಪು ತಾಲೂಕು ಕೋಶಾಧಿಕಾರಿ ಮುಹಮ್ಮದ್ ಇಕ್ಬಾಲ್ ವಂದಿಸಿದರು. ಮುಸ್ಲಿಂ ಒಕ್ಕೂಟದ ಜಿಲ್ಲಾ ಸಮಿತಿ ಸದಸ್ಯ ಅನ್ವರ್ ಅಲಿ ಕಾಪು ನಿರೂಪಿಸಿದರು.
Kshetra Samachara
24/10/2020 03:40 pm