ಮಂಗಳೂರು: ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ಇದೇ ಮೊದಲ ಬಾರಿಗೆ ದಸರಾ ಮೆರವಣಿಗೆ ಇಲ್ಲದೆ, ಮಂಗಳೂರು ದಸರಾ ಸಂಪನ್ನಗೊಂಡಿತು.ಸಂಜೆ 6.30ಕ್ಕೆ ವಿಸರ್ಜನಾ ಪೂಜೆ ನಡೆದು, ಬಳಿಕ ರಾತ್ರಿ 8.30 ರಿಂದ ಗಣಪತಿ, ಆದಿಶಕ್ತಿ ಶ್ರೀ ನವದುರ್ಗೆಯರ ಮಣ್ಣಿನ ಮೂರ್ತಿಗಳನ್ನು ಕ್ಷೇತ್ರಕ್ಕೆ ಒಂದು ಪ್ರದಕ್ಷಿಣೆ ಹಾಕಿ ನಂತರ ಕ್ಷೇತ್ರದ ಪುಷ್ಕರಣಿಯಲ್ಲಿ ವಿಸರ್ಜಿಸಲಾಯಿತು. ಮಧ್ಯರಾತ್ರಿ 12 ಗಂಟೆಗೆ ಶ್ರೀ ಶಾರದಾ ಮಾತೆಯ ಮೂರ್ತಿಯನ್ನು ಕೇತ್ರದ ಮುಖ್ಯದ್ವಾರದವರೆಗೂ ಮೆರವಣಿಗೆಯಲ್ಲಿ ಕರೆತಂದು ಕ್ಷೇತ್ರಕ್ಕೆ ಪ್ರದಕ್ಷಿಣೆ ಹಾಕಲಾಯಿತು. ಬಳಿಕ ಕ್ಷೇತ್ರದ ದೇವರುಗಳಾದ ಶ್ರೀ ಗೋಕರ್ಣನಾಥ ಹಾಗೂ ಶ್ರೀ ಅನ್ನಪೂರ್ಣೇಶ್ವರಿಯ ಬಲಿ ಮೂರ್ತಿಯ ಅವಭೃತ ಸ್ನಾನ ನಡೆಯಿತು. ಕ್ಷೇತ್ರದ ಪುಷ್ಕರಣಿಯಲ್ಲಿ ಶ್ರೀ ಶಾರದಾ ಮಾತೆಗೆ ಪೂಜೆ ಸಲ್ಲಿಸಿ ಬೆಳಗ್ಗಿನ ಜಾವ 2 ಗಂಟೆ ವೇಳೆಗೆ ಪುಷ್ಕರಣಿಯಲ್ಲಿ ಶ್ರೀ ಶಾರದಾಂಬೆಯ ಮೂರ್ತಿಯನ್ನು ವಿಸರ್ಜಿಸಲಾಯಿತು.ಈ ಮೂಲಕ ಈ ಬಾರಿಯ ಸರಳ ಮಂಗಳೂರು ದಸರಾ ಮಹೋತ್ಸವಕ್ಕೆ ತೆರೆ ಬಿದ್ದಿತು.
Kshetra Samachara
27/10/2020 08:04 am