ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕುಕ್ಕೆ ಸುಬ್ರಹ್ಮಣ್ಯ ದೇಗುಲದಲ್ಲಿ ಚಂಪಾ ಷಷ್ಠಿ ಮಹೋತ್ಸವ ಸರಳಾಚರಣೆ: ಸಚಿವ ಕೋಟ

ಸುಬ್ರಹ್ಮಣ್ಯ: ಕುಕ್ಕೆ ಸುಬ್ರಹ್ಮಣ್ಯದಲ್ಲಿ ಈ ವರ್ಷ ಚಂಪಾ ಷಷ್ಠಿ ಉತ್ಸವ ಸರಳ, ಸಂಪ್ರದಾಯಬದ್ಧವಾಗಿ ಆಚರಿಸಲು ತೀರ್ಮಾನ ಕೈಗೊಳ್ಳಲಾಗಿದೆ ಎಂದು ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.

ಕುಕ್ಕೆ ಸುಬ್ರಹ್ಮಣ್ಯದಲ್ಲಿ ಕೊರೊನಾ ಲಾಕ್ ಡೌನ್ ಹಾಗೂ ಅನ್ ಲಾಕ್ ಡೌನ್ ಬಳಿಕ ಇದೇ ಮೊದಲ ಬಾರಿಗೆ ಕ್ಷೇತ್ರದಲ್ಲಿ ಉತ್ಸವ ನಡೆಸಲು ಸರಕಾರ ತೀರ್ಮಾನಿಸಿದ್ದು,

ಕೊರೊನಾ ಲಾಕ್ ಡೌನ್ ಬಳಿಕ ಕ್ಷೇತ್ರದಲ್ಲಿ ನಡೆಯುವ ಬಹುತೇಕ ಎಲ್ಲಾ ಸೇವೆಗಳನ್ನು ರದ್ದುಪಡಿಸಲಾಗಿತ್ತು. ಅಲ್ಲದೆ, ವರ್ಷಂಪ್ರತಿ ನಡೆಯುವ ಕೆಲವು ಆಚರಣೆಗಳನ್ನು ದೇವಸ್ಥಾನದ ಸಿಬ್ಬಂದಿ ಹಾಗೂ ಅರ್ಚಕರಿಗೆ ಸೀಮಿತಗೊಳಿಸಿ ಆಚರಿಸಲಾಗುತ್ತಿತ್ತು.

ಈ ಬಗ್ಗೆ ಸಚಿವರು ಅಧಿಕಾರಿಗಳ ಮತ್ತು ಅಭಿವೃದ್ಧಿ ಸಮಿತಿ ಸದಸ್ಯರ ಜೊತೆ ಚರ್ಚೆ ನಡೆಸಿದರು. ಡಿಸೆಂಬರ್ 12 ರಿಂದ 26 ರ ತನಕ ಚಂಪಾಷಷ್ಠಿ ‌ಮಹೋತ್ಸವ ನಡೆಯಲಿದ್ದು, ಜಾತ್ರೋತ್ಸವಕ್ಕೆ ಎಲ್ಲಾ ವ್ಯವಸ್ಥೆ ಕಲ್ಪಿಸಲು ಸಭೆಯಲ್ಲಿ ತೀರ್ಮಾನಿಸಲಾಗಿದೆ.

ಈ ಸಂದರ್ಭ ಕ್ಷೇತ್ರಕ್ಕೆ ಆಗಮಿಸುವ ಭಕ್ತರಿಗೆ ಊಟ, ವಸತಿ, ಅನ್ನ ಸಂತರ್ಪಣೆ ಸೇವೆ, ತುಲಾಭಾರ ಸೇವೆ ಸಹಿತ ಎಲ್ಲಾ ವ್ಯವಸ್ಥೆ ನಿರ್ವಹಿಸಲು ಕ್ರಮ ಕೈಗೊಳ್ಳಲಾಗಿದೆ. ಜಾತ್ರೋತ್ಸವ ಪ್ರಯುಕ್ತ ಮೂರು ದಿನ ನಡೆಯುವ ಕ್ಷೇತ್ರದ ವಿಶೇಷ ಸೇವೆ ಎಡೆಮಡೆ ಸ್ನಾನವನ್ನು ನೆರವೇರಿಸುವ ಕುರಿತು ಆರೋಗ್ಯ ಇಲಾಖೆಯ ಸಲಹೆಯನ್ನೂ ಕೇಳಲು ತೀರ್ಮಾನಿಸಲಾಗಿದೆ. ಸ್ನಾನಘಟ್ಟದಿಂದ ಕ್ಷೇತ್ರದವರೆಗಿನ 1.5 ಕಿ.ಮೀ. ರಸ್ತೆಗೆ ಇಂಟರ್ ಲಾಕ್ ಅಳವಡಿಸಿ ಕೆಲಸ ಮುಗಿಸಲು ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ ಎಂದರು. ಮಾತ್ರವಲ್ಲದೆ,

ದೇವರ ರಥೋತ್ಸವ ಸೇವೆ ನೆರವೇರಿಸುವ ಸಂದರ್ಭ ಹೆಚ್ಚಿನ ಭಕ್ತಾದಿಗಳಿಗೆ ಅವಕಾಶ ನೀಡದೆ, ನಿರ್ದಿಷ್ಟ ಸಂಖ್ಯೆಯ ಭಕ್ತರಿಗೆ ಮಾತ್ರ ಅವಕಾಶ ಕಲ್ಪಿಸಲಾಗಿದೆ‌. ಜಾತ್ರೋತ್ಸವ ಸಂದರ್ಭ ಆರೋಗ್ಯ,ನಿರಂತರ ವಿದ್ಯುತ್ ಸಂಪರ್ಕಕ್ಕೂ ಕ್ರಮ ಕೈಗೊಳ್ಳಲಾಗಿದೆ ಎಂದು ಸಚಿವರು ಮಾಹಿತಿ ನೀಡಿದ್ದಾರೆ.

Edited By : Manjunath H D
Kshetra Samachara

Kshetra Samachara

15/11/2020 11:14 am

Cinque Terre

11.56 K

Cinque Terre

1

ಸಂಬಂಧಿತ ಸುದ್ದಿ