ಮಂಗಳೂರು: ದೀಪಾವಳಿ ಹಬ್ಬದ ಹಿನ್ನೆಲೆಯಲ್ಲಿ ನಗರದ ಮರೋಳಿಯಲ್ಲಿ ಗೋ ಪೂಜೆ ನಡೆಯಿತು. ಶ್ರೀ ಸೂರ್ಯನಾರಾಯಣ ದೇವಸ್ಥಾನದಲ್ಲಿ ನೂರಾರು ಭಕ್ತರ ಸಮ್ಮುಖದಲ್ಲಿ ವಿಶ್ವ ಹಿಂದೂ ಪರಿಷತ್ ವತಿಯಿಂದ ಗೋ ಪೂಜೆ ನಡೆಯಿತು. ದೇಗುಲದ ಅರ್ಚಕರು ಗೋ ಪೂಜೆ ನೆರವೇರಿಸಿದರು.ಬಳಿಕ ಗೋ ಹತ್ಯೆ ನಿಷೇಧ ಕಾನೂನು ಜಾರಿಗೊಳಿಸುವಂತೆ ಒತ್ತಾಯಿಸಿ ವಿಶ್ವ ಹಿಂದೂ ಪರಿಷತ್ ನಿಂದ ಮುಖ್ಯಮಂತ್ರಿಗಳಿಗೆ ಪೋಸ್ಟ್ ಕಾರ್ಡ್ ಅಭಿಯಾನ ನಡೆಯಿತು.
Kshetra Samachara
15/11/2020 12:46 pm