ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮುಲ್ಕಿ: ಶ್ರೀ ಕ್ಷೇತ್ರ ಬಪ್ಪನಾಡಿನಲ್ಲಿ ದೀಪಾವಳಿ ಭಕ್ತಿ ಸಂಭ್ರಮ...

ಮುಲ್ಕಿ: ಇತಿಹಾಸ ಪ್ರಸಿದ್ಧ ಒಂಬತ್ತು ಮಾಗಣೆಯ ಬಪ್ಪನಾಡು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಶನಿವಾರ ರಾತ್ರಿ ಸಂಭ್ರಮದ ದೀಪಾವಳಿ ಆಚರಣೆ ನಡೆಯಿತು. ದೇವಳದಲ್ಲಿ ರಾತ್ರಿ ಅರ್ಚಕ ಶ್ರೀಪತಿ ಉಪಾಧ್ಯಾಯ ನೇತೃತ್ವದಲ್ಲಿ ಬಲೀಂದ್ರ ಪೂಜೆ ನಡೆದು ಬಳಿಕ ಶ್ರೀ ದೇವರ ನಿತ್ಯಬಲಿಗೆ ಚಾಲನೆ ನೀಡಲಾಯಿತು.

ಈ ಸಂದರ್ಭ ದೇವಳದ ಆಡಳಿತ ಮೊಕ್ತೇಸರ ಮನೋಹರ್ ಶೆಟ್ಟಿ, ಉದ್ಯಮಿ ಅತುಲ್ ಕುಡ್ವ, ಸತೀಶ್ ಭಂಡಾರಿ, ರಾಜ್ಯೋತ್ಸವ ಪ್ರಶಸ್ತಿ ವಿಜೇತ ನಾಗೇಶ್ ಬಪ್ಪನಾಡು, ಸಿಬ್ಬಂದಿ ಶಿವಶಂಕರ್ ಮತ್ತಿತರರು ಉಪಸ್ಥಿತರಿದ್ದರು. ಈ ನಡುವೆ ದೇವಳದಲ್ಲಿ ಕೋವಿಡ್ ನಿಯಮ ಪಾಲಿಸಿಕೊಂಡು ಶುಕ್ರವಾರದಿಂದ ನಿತ್ಯ ಅನ್ನದಾನ ಪ್ರಾರಂಭವಾಗಿದ್ದು, ದೇವಳಕ್ಕೆ ಆಗಮಿಸುತ್ತಿರುವ ಭಕ್ತರ ಸಂಖ್ಯೆ ಹೆಚ್ಚಳವಾಗಿದೆ.

Edited By : Manjunath H D
Kshetra Samachara

Kshetra Samachara

15/11/2020 01:01 pm

Cinque Terre

13.24 K

Cinque Terre

0

ಸಂಬಂಧಿತ ಸುದ್ದಿ