ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಉಡುಪಿ: ಶ್ರೀಕೃಷ್ಣಮಠದಲ್ಲಿ ಕನಕದಾಸ ಜಯಂತಿ ಆಚರಣೆ

ಉಡುಪಿ: ಉಡುಪಿಯ ಶ್ರೀಕೃಷ್ಣಮಠದ ಎದುರಿನ ಕನಕದಾಸರ ಪೀಠದಲ್ಲಿ ಪರ್ಯಾಯ ಅದಮಾರು ಶ್ರೀಗಳು ಕನಕದಾಸ ಜಯಂತಿ ಪ್ರಯುಕ್ತ ಕನಕದಾಸರ ಪ್ರತಿಮೆಗೆ ಪುಷ್ಪಾರ್ಚನೆ ನಡೆಸಿದರು.ವರ್ಷಂಪ್ರತಿ ಕನಕದಾಸ ಜಯಂತಿ ಸಂದರ್ಭ ಕನಕ ಸದ್ಭಾವನಾ ಜ್ಯೋತಿ ಯಾತ್ರೆಯು ಓಂ ಕೃಷ್ಣಮೂರ್ತಿ ನೇತೃತ್ವದಲ್ಲಿ ಇಲ್ಲಿ ಸಂಪನ್ನಗೊಳ್ಳುತ್ತದೆ. ಆದರೆ, ಈ ಬಾರಿ ಕೊರೊನಾ ಕಾರಣದಿಂದ ಕನಕ ಸದ್ಭಾವನಾ ಜ್ಯೋತಿ ಯಾತ್ರೆ ರದ್ದುಗೊಂಡಿತ್ತು. ಈ ಹಿನ್ನೆಲೆಯಲ್ಲಿ ಕನಕ ಪೀಠದಲ್ಲಿ ಸರಳವಾಗಿ ಜಯಂತಿ ಆಚರಣೆ ನಡೆಯಿತು. ಪರ್ಯಾಯ ಈಶಪ್ರಿಯ ತೀರ್ಥ ಶ್ರೀಗಳು ಕನಕನ ಪ್ರತಿಮೆಗೆ ಮಾಲಾರ್ಪಣೆ ಮಾಡಿದರು. ಈ ಸಂದರ್ಭ ಓಂ ಕೃಷ್ಣಮೂರ್ತಿ ಮತ್ತಿತರ ಮುಖಂಡರು ಹಾಜರಿದ್ದರು.

Edited By : Manjunath H D
Kshetra Samachara

Kshetra Samachara

03/12/2020 03:36 pm

Cinque Terre

30.12 K

Cinque Terre

0

ಸಂಬಂಧಿತ ಸುದ್ದಿ