ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಧರ್ಮಸ್ಥಳ: ಲಕ್ಷ ದೀಪೋತ್ಸವ ಸಂಭ್ರಮಕ್ಕೆ ತೆರೆ, ಮನವರಳಿಸಿದ ಸಾಹಿತ್ಯ ಸಮ್ಮೇಳನ, ಗೌರವಾರ್ಪಣೆ

ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಲಕ್ಷದೀಪೋತ್ಸವ ಸಂಭ್ರಮ, ಸಡಗರಕ್ಕೆ ತೆರೆ ಬಿದ್ದಿದೆ.ಲಕ್ಷದೀಪೋತ್ಸವದ ಅಂಗವಾಗಿ ಅಮೃತವರ್ಷಿಣಿ ಸಭಾಭವನದಲ್ಲಿ ನಾನಾ ವಿಷಯ ಮಂಥನದ 88ನೇ ಸಾಹಿತ್ಯ ಸಮ್ಮೇಳನವೂ ನಡೆಯಿತು.

ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆಯವರ ನೇತೃತ್ವದಲ್ಲಿ ಸಾಹಿತ್ಯ ಸಮ್ಮೇಳನ ನಡೆದಿದ್ದು, ಹಿರಿಯ ವಿದ್ವಾಂಸ, ವೇದಭೂಷಣ ಡಾ.ಎಸ್. ರಂಗನಾಥ್ ಉದ್ಘಾಟಿಸಿದರು.

ಲಕ್ಷದೀಪೋತ್ಸವ ಈ ಬಾರಿ ಕೊರೊನಾ ಆತಂಕದ ನಡುವೆಯೂ ನಡೆದಿದ್ದು, ರಾಜ್ಯದ ವಿವಿಧ ಜಿಲ್ಲೆಗಳಿಂದ ಸಾವಿರಾರು ಮಂದಿ ಭಕ್ತರು ಧರ್ಮಸ್ಥಳಕ್ಕೆ ಆಗಮಿಸಿ ಶ್ರೀ ಮಂಜುನಾಥ ಸ್ವಾಮಿಯ ದರ್ಶನ ಪಡೆದರು.

ಕೊರೊನಾ ಹಿನ್ನೆಲೆಯಲ್ಲಿ ಈ ಬಾರಿ ವಸ್ತು ಪ್ರದರ್ಶನ, ಬೀದಿ ಬದಿ ವ್ಯಾಪಾರಕ್ಕೆ ತಡೆ ಹಿಡಿಯಲಾಗಿತ್ತು. ಸಾಂಸ್ಕೃತಿಕ ಕಾರ್ಯಕ್ರಮ ಅತಿ ಸರಳವಾಗಿತ್ತು.

ಸರಕಾರದ ಕೋವಿಡ್ ನಿಯಮಾವಳಿಯಂತೆಯೇ ಲಕ್ಷದೀಪೋತ್ಸವ ಶಿಸ್ತಿನಿಂದ ಆಯೋಜಿಸಲಾಗಿತ್ತು.

Edited By : Manjunath H D
Kshetra Samachara

Kshetra Samachara

15/12/2020 07:33 am

Cinque Terre

22.24 K

Cinque Terre

1

ಸಂಬಂಧಿತ ಸುದ್ದಿ