ಆನೆಗುಡ್ಡೆ: ಜಿಲ್ಲೆಯ ಹೆಸರಾಂತ ಆನೆಗುಡ್ಡೆ ಶ್ರೀ ವಿನಾಯಕ ದೇವಸ್ಥಾನದಲ್ಲಿ ಕೊರೋನಾ ಭೀತಿಯ ನಡುವೆಯೂ ಗಣೇಶ ಚತುರ್ಥಿ ಪ್ರಯುಕ್ತ ಸರಕಾರದ ಮಾರ್ಗಸೂಚಿಯಂತೆ ಸರಳವಾಗಿ, ಸಂಭ್ರಮದಿಂದ ನಡೆಯಿತು. ಮುಂಜಾನೆಯಿಂದಲೇ ಭಕ್ತರು ಆಗಮಿಸಿ ವಿಶೇಷ ಪೂಜೆಯಲ್ಲಿ ಪಾಲ್ಗೊಂಡರು. ಬೆಳಿಗ್ಗೆನಿಂದಲೇ ದೇವಸ್ಥಾನಕ್ಕೆ ಆಗಮಿಸುವ ಭಕ್ತರಿಗೆ ದೇವಾಲಯದ ಒಳಗೆ ಗಣಪನ ದರ್ಶನಕ್ಕೆ ಮಾತ್ರವೇ ಅವಕಾಶ ಕಲ್ಪಿಸಲಾಗಿತ್ತು. ಅರ್ಚಕರಿಂದ ವಿಶೇಷ ಪೂಜೆಗಳು ನಡೆಸಲಾಗಿದ್ದು ಹೊರಗಡೆ ಭಕ್ತರಿಗೆ ಹಣ್ಣು ಕಾಯಿ, ತೀರ್ಥಪ್ರಸಾದ ವ್ಯವಸ್ಥೆ ಮಾಡಲಾಗಿತ್ತು. 1008 ಕಾಯಿ (ಸಹಸ್ರ ನಾರಿಕೇಳ) ಗಣಯಾಗ ಮಾಡಿ ಕೊರೋನಾ ಮಹಾಮಾರಿ ತೊಲಗುವ ನಿಟ್ಟಿನಲ್ಲಿ ಸಂಕಲ್ಪ ಪೂಜೆ ಮಾಡಲಾಯಿತು.
Kshetra Samachara
10/09/2021 05:39 pm