ಮುಲ್ಕಿ: ಮುಲ್ಕಿ ಪೊಲೀಸ್ ಠಾಣೆಯಲ್ಲಿ ಗುರುವಾರ ಆಯುಧ ಪೂಜೆ ವಿಜೃಂಭಣೆಯಿಂದ ನಡೆಯಿತು.ಬೆಳಗ್ಗೆ ಬಪ್ಪನಾಡು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಅರ್ಚಕರಾದ ಶ್ರೀಪತಿ ಉಪಾಧ್ಯಾಯ ನೇತೃತ್ವದಲ್ಲಿ ಗಣಹೋಮ ಬಳಿಕ ಲಕ್ಷ್ಮಿ ಪೂಜೆ, ಆಯುಧಪೂಜೆ, ವಾಹನ ಪೂಜೆ ನಡೆಯಿತು.ಬಳಿಕ ಮಹಾಪೂಜೆ ನಡೆದು ಪ್ರಸಾದ ವಿತರಿಸಲಾಯಿತು. ಈ ಸಂದರ್ಭ ಅರ್ಚಕರಾದ ಶ್ರೀಪತಿ ಉಪಾಧ್ಯಾಯ ವಿಶೇಷ ಆಶೀರ್ವಚನ ನೀಡಿ ಕೊರೊನ ದಿನಗಳಲ್ಲಿ ಮುಲ್ಕಿ ಪೊಲೀಸ್ ಠಾಣೆಯ ಸಿಬ್ಬಂದಿಗಳು ಹಗಲಿರುಳೆನ್ನದೆ ವಿಶೇಷ ಕಾರ್ಯನಿರ್ವಹಿಸಿ ಜನಜಾಗೃತಿ ಮೂಡಿಸುವ ಯತ್ನ ಮಾಡಿದ್ದು ಮುಂದಿನ ದಿನಗಳಲ್ಲಿ ಮತ್ತಷ್ಟು ಕಾರ್ಯಸಿದ್ದಿ ಆಗಲಿ ಎಂದರು.
ಈ ಸಂದರ್ಭ ಮೂಲ್ಕಿ ಠಾಣಾ ಇನ್ಸ್ಪೆಕ್ಟರ್ ಕುಸುಮಾಧರ, ಎ ಎಸ್ಐ ಬಾಲಕೃಷ್ಣ ರೈ, ಚಂದ್ರಶೇಖರ್, ಕೃಷ್ಣಪ್ಪ, ಸಿಬ್ಬಂದಿ ಸಂಜೀವ, ಪ್ರಮೋದ್ ಮತ್ತಿತರ ಸಿಬ್ಬಂದಿಗಳು ಉಪಸ್ಥಿತರಿದ್ದು ಪ್ರಸಾದ ಸ್ವೀಕರಿಸಿದರು.
ದಕಜಿಲ್ಲಾಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಶಾಲೆಟ್ ಪಿಂಟೋ, ಮುಲ್ಕಿ ನಪಂ ಮುಖ್ಯಾಧಿಕಾರಿ ಚಂದ್ರಪೂಜಾರಿ,ಸದಸ್ಯರಾದ ಪುತ್ತುಬಾವ, ಯೋಗೀಶ್ ಕೋಟ್ಯಾನ್, ಹರ್ಷ ರಾಜ ಶೆಟ್ಟಿ, ಬಾಲಚಂದ್ರ ಕಾಮತ್, ಮಂಜುನಾಥ ಕಂಬಾರ, ಮುನ್ನಾ ಯಾನೆ ಮಹೇಶ್, ಡಾ.ಹರಿಶ್ಚಂದ್ರ ಸಾಲ್ಯಾನ್, ಮುಲ್ಕಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮೋಹನ್ ಕೋಟ್ಯಾನ್, ಕೆಪಿಸಿಸಿ ಕೋಆರ್ಡಿನೇಟರ್ ವಸಂತ ಬೆರ್ನಾಡ್, ಯುವ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಪೂಜಾರ, ವಿನೋದ್ ಸಾಲ್ಯಾನ್ ಬೆಳ್ಳಾಯರು, ಸುಧೀರ್ ಶೆಟ್ಟಿ ಶಿಮಂತೂರು, ಉದಯ ಶೆಟ್ಟಿ ಅಧಿಧನ್, ಅನಿತಾ ಕಿನ್ನಿಗೋಳಿ, ಮತ್ತಿತರರು ಭೇಟಿ ನೀಡಿ ಪ್ರಸಾದ ಸ್ವೀಕರಿಸಿ ಶುಭ ಹಾರೈಸಿದರು.
Kshetra Samachara
14/10/2021 06:56 pm