ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಇಂದು ಸಂಜೆ ಸರ್ವಧರ್ಮ ಸಮ್ಮೇಳನದ 89ನೇ ಅಧಿವೇಶನವನ್ನು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಉದ್ಘಾಟಿಸಿದರು.
ಬಳಿಕ ರಾಜ್ಯಪಾಲರು ಮಾತನಾಡಿ, ಶ್ರೀ ಕ್ಷೇತ್ರ ಧರ್ಮಸ್ಥಳ ಸರ್ವ ಧರ್ಮೀಯರೂ ಸಂದರ್ಶಿಸುವ ವಿಶೇಷ ಪುಣ್ಯ ತಾಣ. ಅನ್ನದಾನ, ವಿದ್ಯಾದಾನ, ಆರೋಗ್ಯಸೇವೆ, ಆಯುರ್ವೇದ, ಯೋಗ, ಧಾರ್ಮಿಕ- ಸಂಸ್ಕೃತಿಗಳ ಸಂಗಮ ಕ್ಷೇತ್ರ ಎಂದರು.
ಬೆಂಗಳೂರಿನ ಎಸ್. ವ್ಯಾಸ ಯೋಗ ವಿವಿ ವಿಶ್ರಾಂತ ಕುಲಪತಿ ಪ್ರೊ. ರಾಮಚಂದ್ರ ಜಿ. ಭಟ್ ಅಧ್ಯಕ್ಷತೆ ವಹಿಸಿದ್ದರು. ಧರ್ಮಾಧಿಕಾರಿ ಡಾ.ಡಿ. ವೀರೇಂದ್ರ ಹೆಗ್ಗಡೆ, ಡಾ. ಸರ್ಫ್ರಾಜ್ ಚಂದ್ರಗುತ್ತಿ, ಡಾ. ಎಂ.ಎಸ್ ಪದ್ಮ, ಫಾ. ವೀರೇಶ್ ಮೋರಸ್ ಸೇರಿದಂತೆ ವಿವಿಧ ಧರ್ಮಗಳ ಪ್ರತಿನಿಧಿಗಳು, ವಿದ್ವಾಂಸರು ಮತ್ತಿತರ ಗಣ್ಯರು ಉಪಸ್ಥಿತರಿದ್ದರು.
Kshetra Samachara
02/12/2021 08:03 pm