ಉಪ್ಪೂರು: ಉಪ್ಪೂರು ಮಹತೋಭಾರ ಶ್ರೀ ಸಿದ್ಧಿ ವಿನಾಯಕ ದೇವಸ್ಥಾನದಲ್ಲಿ ಜಾತ್ರಾ ಮಹಾ ರಥೋತ್ಸವದ ಅಂಗವಾಗಿ ನಾನಾ ಧಾರ್ಮಿಕ ಕಾರ್ಯಕ್ರಮಗಳು ನಡೆಯುತ್ತಿದ್ದು, ಸನ್ನಿಧಾನಕ್ಕೆ ಆಗಮಿಸಿದ ಪುತ್ತಿಗೆ ಮಠದ ಶ್ರೀ ಸುಗುಣೇಂದ್ರ ತೀರ್ಥ ಸ್ವಾಮೀಜಿಯವರನ್ನು ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ರಾಘವೇಂದ್ರ ಭಟ್ ದಂಪತಿ ಪಾದಪೂಜೆ ಮಾಡಿ ಬರಮಾಡಿಕೊಂಡರು.
ಬಳಿಕ ಜರುಗಿದ ಧಾರ್ಮಿಕ ಸಭೆಯಲ್ಲಿ ದೇವಸ್ಥಾನದಲ್ಲಿ ಅರ್ಚಕರಾಗಿ ಮತ್ತು ಇನ್ನಿತರ ಕೆಲಸಗಳಲ್ಲಿ ತೊಡಗಿಸಿಕೊಂಡವರನ್ನು ಸನ್ಮಾನಿಸಲಾಯಿತು. ಈ ಸಂದರ್ಭ ಮಾತನಾಡಿದ ಪುತ್ತಿಗೆ ಶ್ರೀಗಳು, ದೇವಸ್ಥಾನದಲ್ಲಿ ಸೇವೆ ಸಲ್ಲಿಸಿದ ಎಲ್ಲರನ್ನೂ ಗೌರವಿಸುವ ಕೆಲಸ ಶ್ಲಾಘನೀಯ ಎಂದರು. ಈ ವೇಳೆ ದೇವಸ್ಥಾನದ ಭಕ್ತಿಗೀತೆಯ ಧ್ವನಿ ಸುರುಳಿ ಬಿಡುಗಡೆಗೊಳಿಸಲಾಯಿತು.
ಶ್ರೀಮತಿ ಸ್ವಪ್ನ ರಾಜ್ ಮತ್ತು ಬಳಗದವರಿಂದ ಭಕ್ತಿಗೀತೆ ಗಾಯನ ಜರುಗಿತು.
Kshetra Samachara
09/03/2022 06:07 pm