ಬಜಪೆ: ಯುವಕರ ಮಧ್ಯೆ ಒಗ್ಗಟ್ಟು ಇದ್ದರೆ ಸಮಾಜದ ಅಭಿವೃದ್ದಿ ಸಾಧ್ಯ ಎಂದು ಉಡುಪಿ ಪೇಜಾವರ ಮಠದ ಶ್ರೀ ವಿಶ್ವ ಪ್ರಸನ್ನ ತೀರ್ಥ ಸ್ವಾಮೀಜಿ ಅವರು ಹೇಳಿದರು. ಅವರು ಎಕ್ಕಾರು ವಿಜಯ ಯುವ ಸಂಗಮದ ರಜತ ಸಂಭ್ರಮ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಸಂಸದ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು.
ಈ ಸಂದರ್ಭ ವೇದಿಕೆಯಲ್ಲಿ ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದ ಅರ್ಚಕ ಅನಂತಪದ್ಮನಾಭ ಆಸ್ರಣ್ಣ, ಎಕ್ಕಾರು ಶ್ರೀಕೃಷ್ಣ ಮಠದ ಹರಿದಾಸ ಉಡುಪ, ಎಕ್ಕಾರು ಶ್ರೀ ಕೊಡಮಣೆತ್ತಾಯ ದೈವಸ್ಥಾನದ ಆಡಳಿತ ಮೊಕ್ತೇಸರ ನಿತಿನ್ ಹೆಗ್ಡೆ ಕಾವರಮನೆ, ಮಂಗಳೂರು ಪೊಲೀಸ್ ಕಮಿಷನರ್ ಎನ್ .ಶಶಿಕುಮಾರ್, ಮೂಲ್ಕಿ ಮೂಡಬಿದಿರೆ ಶಾಸಕ ಉಮಾನಾಥ ಕೋಟ್ಯಾನ್ ,ಸಂಗಮದ ಅಧ್ಯಕ್ಷ ಆದರ್ಶ್ ಶೆಟ್ಟಿ, ಗೌರವಾಧ್ಯಕ್ಷ ರತ್ನಾಕರ ಶೆಟ್ಟಿ, ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕಸ್ತೂರಿ ಪಂಜ, ಬಿಜೆಪಿ ಮುಖಂಡ ಈಶ್ವರ್ ಕಟೀಲ್ ಉಪಸ್ಥಿತರಿದ್ದರು.
ಸ್ಲಗ್: “ಒಗ್ಗಟ್ಟಿನ ಮೂಲಕ ಅಭಿವೃದ್ಧಿ ಸಾಧಿಸಿ”
Kshetra Samachara
05/04/2022 09:36 pm