ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಉಚ್ಚಿಲ ಶ್ರೀ ಮಹಾಲಕ್ಷ್ಮಿ ದೇವಳದ ವಾರ್ಷಿಕ ರಥೋತ್ಸವ ಸಂಪನ್ನ

ಉಚ್ಚಿಲ: ಉಚ್ಚಿಲ ಶ್ರೀ ಮಹಾಲಕ್ಷ್ಮಿ ದೇವಸ್ಥಾನದಲ್ಲಿ ವಾರ್ಷಿಕ ಹಗಲು ರಥೋತ್ಸವ ಬುಧವಾರ ಸಂಪನ್ನಗೊಂಡಿತು.

ದೇವಾಲಯದ ತಂತ್ರಿ ವರ್ಯರಾದ ವೇದಮೂರ್ತಿ ಕುಕ್ಕಿಕಟ್ಟೆ ರಾಘವೇಂದ್ರ ತಂತ್ರಿಯವರ ನೇತೃತ್ವದಲ್ಲಿ ದೇವಳದ ಪ್ರಧಾನ ಅರ್ಚಕರಾದ ರಾಘವೇಂದ್ರ ಉಪಾಧ್ಯಾಯ, ವಿಷ್ಣುಮೂರ್ತಿ ಉಪಾಧ್ಯಾಯ ಹಾಗೂ ವೈದಿಕರ ಪೌರೋಹಿತ್ಯದಲ್ಲಿ ರಥೋತ್ಸವ ಪ್ರಕ್ರಿಯೆ ಸಂಪನ್ನಗೊಂಡಿತು.

ಈ ಸಂದರ್ಭ ದೇವಳದ ಜೀರ್ಣೋದ್ಧಾರ ಸಮಿತಿಯ ಗೌರವಾಧ್ಯಕ್ಷ ನಾಡೋಜ ಡಾ. ಜಿ. ಶಂಕರ್, ಅಧ್ಯಕ್ಷ ಗುಂಡು ಬಿ ಅಮೀನ್, ದಕ್ಷಿಣ ಕನ್ನಡ ಮೊಗವೀರ ಮಹಾಜನ ಸಂಘದ ಅಧ್ಯಕ್ಷ ಜಯ ಸಿ. ಕೋಟ್ಯಾನ್, ಕ್ಷೇತ್ರಾಡಳಿತ ಮಂಡಳಿ ಅಧ್ಯಕ್ಷ ವಾಸುದೇವ ಸಾಲ್ಯಾನ್ ಸಹಿತ ಆಡಳಿತ ಮಂಡಳಿಯ ಸದಸ್ಯರು ಹಾಗೂ ಸಾವಿರಾರು ಸಂಖ್ಯೆಯಲ್ಲಿ ಭಕ್ತಾದಿಗಳು ಉಪಸ್ಥಿತರಿದ್ದರು.

ಮಧ್ಯಾಹ್ನ ಮಹಾಲಕ್ಷ್ಮಿ ದೇವಿಯ ಅನ್ನಪ್ರಸಾದವನ್ನು ಸಾವಿರಾರು ಭಕ್ತಾದಿಗಳು ಸ್ವೀಕರಿಸಿದರು.

Edited By : Nagesh Gaonkar
Kshetra Samachara

Kshetra Samachara

13/04/2022 05:57 pm

Cinque Terre

10.53 K

Cinque Terre

0