ಮುಲ್ಕಿ: ಮುಲ್ಕಿ ಸಮೀಪದ ಶಿಮಂತೂರು ಶ್ರೀ ಆದಿ ಜನಾರ್ಧನ ದೇವಸ್ಥಾನ ದಲ್ಲಿ ಸೌರಮಾನ ಯುಗಾದಿ ಪ್ರಯುಕ್ತ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆಯಿತು.
ಪ್ರಾತಃಕಾಲ ಕ್ಷೇತ್ರದ ಆರ್ಚಕ ಪುರುಷೋತ್ತಮ ಭಟ್ ನೇತೃತ್ವದಲ್ಲಿ ಧಾರ್ಮಿಕ ಕಾರ್ಯಕ್ರಮಗಳ ಅಂಗವಾಗಿ ವಿಶೇಷ ಪ್ರಾರ್ಥನೆ ಪಂಚಾಂಗಶ್ರವಣ ಕಾರ್ಯಕ್ರಮ ನಡೆಯಿತು. ಬಳಿಕ ಶ್ರೀ ಆದಿ ಜನಾರ್ದನ ಮಕ್ಕಳ ಕುಣಿತ ಭಜನಾ ಮಂಡಳಿ ವತಿಯಿಂದ ಕುಣಿತ ಭಜನಾ ಕಾರ್ಯಕ್ರಮ ನಡೆಯಿತು.
ಬೆಂಗಳೂರಿನ ಅಂತರಾಷ್ಟ್ರೀಯ ವಾಸ್ತುತಜ್ಞರು ವೈಜ್ಞಾನಿಕ ಜ್ಯೋತಿಷಿ ಶ್ರೀ ಶ್ರೀ ಚಂದ್ರಶೇಖರ ಸ್ವಾಮೀಜಿ ದೇವಸ್ಥಾನಕ್ಕೆ ಭೇಟಿ ನೀಡಿ ಪ್ರಸಾದ ಸ್ವೀಕರಿಸಿದರು.
ಈ ಸಂದರ್ಭ ಅವರು ಕುಣಿತ ಭಜನಾ ಮಂಡಳಿಯ ಮಕ್ಕಳನ್ನು ಗೌರವಿಸಿ ಮಾತನಾಡಿ ಧಾರ್ಮಿಕ ಆಚರಣೆಗಳು ಸಂಸ್ಕೃತಿಯ ಪ್ರತೀಕವಾಗಿದ್ದು ಸರಕಾರದ ಪ್ರೋತ್ಸಾಹ ಶ್ಲಾಘನೀಯ ಎಂದರು.
ಬಳಿಕ ದೇವಸ್ಥಾನದಲ್ಲಿ ಮಧ್ಯಾಹ್ನ ಮಹಾಪೂಜೆ ಹಾಗೂ ಪ್ರಸಾದ ವಿತರಣೆ ನಡೆಯಿತು.
ಈ ಸಂದರ್ಭ ಜ್ಯೋತಿಷಿ ವಿಶ್ವನಾಥ ಭಟ್, ಶ್ರೀ ಶ್ರೀ ಚಂದ್ರಶೇಖರ ಸ್ವಾಮೀಜಿ ಆಶ್ರಮದ ನಿರ್ದೇಶಕಿ ರಜನಿ ಸಿ ಭಟ್, ರಾಹುಲ್ ಸಿ ಭಟ್, ರೋಶನಿ ರಾಘವ ಸೂರ್ಯ, ಸಂಚಾಲಕ ಗುರುಪ್ರಸಾದ್ ಭಟ್ ಮುಂಡ್ಕೂರು, ಪುನೀತ್ ಕೃಷ್ಣ, ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಚಂದ್ರಹಾಸ ಶೆಟ್ಟಿ ಸದಸ್ಯರಾದ ದಿನೇಶ್ಚಂದ್ರ ಅಜಿಲ, ಹರೀಶ್ ಶೆಟ್ಟಿ, ಶಶಿಕಲಾ, ಶಿಮಂತೂರು ಹಾಲು ಉತ್ಪಾದಕರ ಸಂಘದ ಅಧ್ಯಕ್ಷೆ ಪದ್ಮಿನಿ ಶೆಟ್ಟಿ, ಯುವಕ ಮಂಡಲದ ಅಧ್ಯಕ್ಷ ಕಿಶೋರ್ ಶೆಟ್ಟಿ, ವಿಜಯಕುಮಾರ್ ಶೆಟ್ಟಿ, ಸಂದೀಪ್ ಕುಮಾರ್, ದೇವಸ್ಥಾನದ ಮ್ಯಾನೇಜರ್ ಕಿಶೋರ್ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು.
Kshetra Samachara
15/04/2022 03:43 pm