ಬಂಟ್ವಾಳ:ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ನಾವೂರು ಗ್ರಾಮದ ಕೂಡಿಬೈಲಿನಲ್ಲಿ ಮಾಜಿ ಸಚಿವ ಬಿ.ರಮಾನಾಥ ರೈ ಅಧ್ಯಕ್ಷತೆಯಲ್ಲಿ 11 ನೇ ವರ್ಷದ ಮೂಡೂರು-ಪಡೂರು ಜೋಡುಕರೆ ಕಂಬಳ ಯಶಸ್ವಿಯಾಗಿ ನಡೆಯುತ್ತಿದೆ. ಕಂಬಳವನ್ನು ಉದ್ಘಾಟಿಸಿ ಮಾತನಾಡಿದ ಸೊಲೂರು ಕರ್ನಾಟಕ ಆರ್ಯ ಈಡಿಗ ಮಹಾ ಸಂಸ್ಥಾನದ ಪೀಠಾಧಿಪತಿ ಶ್ರೀ ವಿಖ್ಯಾತಾನಂದ ಸ್ವಾಮೀಜಿ, ರಮಾನಾಥ ರೈ ನೇತೃತ್ವದಲ್ಲಿ ಪುನರಾರಂಭಗೊಂಡಿರುವ ಕಂಬಳ, ಸಾಮರಸ್ಯದ ಸಂದೇಶವನ್ನು ಎಲ್ಲೆಡೆಯಲ್ಲೂ ಪಸರಿಸಲಿ ಎಂದರು.
ಶ್ರೀ ಧಾಮ ಮಾಣಿಲದ ಶ್ರೀ ಮೋಹನದಾಸ ಸ್ವಾಮೀಜಿ ಮಾತನಾಡಿ, ಪರಸ್ಪರ ಅಶಾಂತಿ ಅಸಮಾಧಾನ ಮೇಳೈಸುವ ಈ ಕಾಲಘಟ್ಟದಲ್ಲಿ ಐಕ್ಯತೆ ಹಾಗೂ ಭಾವೈಕ್ಯತೆಗೆ ಈ ಕಂಬಳದ ಮೂಲಕ ಪ್ರೇರಣೆ ಸಿಗಲಿ ಎಂದರು. ಅಧ್ಯಕ್ಷತೆಯನ್ನು ವಹಿಸಿದ್ದ ಕಂಬಳ ಸಮಿತಿ ಗೌರವಾಧ್ಯಕ್ಷ, ಮಾಜಿ ಸಚಿವ ಬಿ.ರಮಾನಾಥ ರೈ ಮಾತನಾಡಿ, ಸಾಮರಸ್ಯದ ಪ್ರತೀಕವಾಗಿ ನಾವೂರಿನಲ್ಲಿ ಕಂಬಳ ಆಯೋಜನೆ ಮಾಡಲಾಗಿದ್ದು, ಅತೀ ಕಡಿಮೆ ಅವಧಿಯಲ್ಲಿ ಕಂಬಳದ ಕರೆ ನಿರ್ಮಿಸಿ , ಕಂಬಳ ಕೂಟದ ಯಶಸ್ವಿ ಆಯೋಜನೆಯಾಗಿರುವುದು ಭಗವಂತನ ಕೃಪೆಗೆ ಸಾಕ್ಷಿ ಎಂದರು.
Kshetra Samachara
17/04/2022 10:51 pm