ಬೈಂದೂರು: ಉದ್ಯಮಿ ಯು.ಬಿ ಶೆಟ್ಟಿ ಕೊಡುಗೆಯಾಗಿ ನೀಡಿದ ಉಪ್ಪುಂದ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ನೂತನ ರಾಜಗೋಪುರ ಲೋಕಾರ್ಪಣೆ ಕಾರ್ಯಕ್ರಮ ನಡೆಯಿತು. ರಾಜರ್ಷಿ ಡಾ. ಡಿ. ವೀರೇಂದ್ರ ಹೆಗ್ಗಡೆ ಯವರು ನೂತನ ರಾಜಗೋಪುರ ಲೋಕಾರ್ಪಣೆಗೊಳಿಸಿದರು. ಬಳಿಕ ನಡೆದ ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ಆಶೀರ್ವಚನ ನೀಡಿದರು.
ಉಪ್ಪುಂದ ರಾಷ್ಟ್ರೀಯ ಹೆದ್ದಾರಿಯಿಂದ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ವರೆಗೆ ರಾಜರ್ಷಿ ಡಾ. ವೀರೇಂದ್ರ ಹೆಗ್ಗಡೆಯವರನ್ನು ಅಲಂಕೃತವಾದ ವಾಹನದಲ್ಲಿ ಪೂರ್ಣಕುಂಭ ಸ್ವಾಗತದೊಂದಿಗೆ ದೇವಸ್ಥಾನಕ್ಕೆ ಬರಮಾಡಿಕೊಳ್ಳಲಾಯಿತು. ಬೈಂದೂರು ಶಾಸಕ ಬಿ.ಎಂ ಸುಕುಮಾರ್ ಶೆಟ್ಟಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.
ಈ ಸಂದರ್ಭದಲ್ಲಿ ರಾಜಗೋಪುರದ ದಾನಿಗಳಾದ ಯು.ಬಿ ಶೆಟ್ಟಿ ಹಾಗೂ ರಂಜನಾ ಯು.ಬಿ ಶೆಟ್ಟಿಯವರನ್ನು ಸಮ್ಮಾನಿಸಲಾಯಿತು,ದೇವಸ್ಥಾನದ ಪ್ರಧಾನ ಅರ್ಚಕ ಪ್ರಕಾಶ ಉಡುಪ,ತಂತ್ರಿ ಮಂಜುನಾಥ ಅಡಿಗ ಹಾಗೂ ಶಿಲ್ಪಿ ಶ್ರೀಧರ ಮೂರ್ತಿಯವರನ್ನು ಗೌರವಿಸಲಾಯಿತು.
Kshetra Samachara
21/05/2022 10:13 pm