ಮುಲ್ಕಿ: ಮುಲ್ಕಿಯ ಕೆಎಸ್ ರಾವ್ ನಗರ ಶ್ರೀ ನಾರಾಯಣ ಗುರು ಸಮಾಜ ಸೇವಾ ಸಂಘದಿಂದ ಗುರು ಮಂದಿರದಲ್ಲಿ ಅಮೃತ ಶಿಲೆಯ ನೂತನ ಗುರು ಮೂರ್ತಿ ಪ್ರತಿಷ್ಠಾಪನೆ, ಕಲಶಾಭಿಷೇಕ, ಧಾರ್ಮಿಕ ಸಭೆ ನಡೆಯಿತು.
ಸಮಾರಂಭವನ್ನು ಕರ್ನಾಟಕ ಸರ್ಕಾರದ ಇಂಧನ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವ ಸುನಿಲ್ ಕುಮಾರ್ ಉದ್ಘಾಟಿಸಿ ಮಾತನಾಡಿ, ಸಂಘಟನೆಯೊಂದಿಗೆ ಸಮಾಜ ಬಲಿಷ್ಠವಾಗಬೇಕು. ಗುರು ಮಂದಿರಗಳು ಕೇವಲ ಭಕ್ತಿಗೆ ಸೀಮಿತವಾಗದೆ ವಿವಿಧ ಧಾರ್ಮಿಕ ಸಾಮಾಜಿಕ ಶೈಕ್ಷಣಿಕ ಕ್ಷೇತ್ರಗಳಲ್ಲಿ ಭಾಗಿಯಾಗಿ ರಾಷ್ಟ್ರಕ್ಕೆ ಮಾದರಿಯಾಗಬೇಕು ಎಂದರು.
ರಾಜ್ಯ ಸಮಾಜ ಕಲ್ಯಾಣ ಇಲಾಖೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಮಾತನಾಡಿ, ಸಮಾಜದ ಕಟ್ಟಕಡೆಯ ವ್ಯಕ್ತಿಗೆ ನ್ಯಾಯ ದೊರಕಿಸಲು ಸಂಘಟನೆಗಳು ಕಾರ್ಯಪ್ರವೃತ್ತರಾಗಬೇಕು, ಪ್ರಜಾಪ್ರಭುತ್ವದಲ್ಲಿ ಟೀಕೆ-ಟಿಪ್ಪಣಿಗಳು ಸಹಜವಾಗಿದ್ದು ಎದುರಿಸುವ ಶಕ್ತಿ ಬೇಕು ಎಂದರು.
ಬೆಳಗಾಂ ನಿಪ್ಪಾಣಿಯ ಓಂ ಶಕ್ತಿ ಮಠ ರಸಾಯಿ ತೆಂಡೂರು ನ ಮಠಾಧಿಪತಿ ಅರುಣಾನಂದ ತೀರ್ಥ ಸ್ವಾಮೀಜಿ ಆಶೀರ್ವಚನ ನೀಡಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಅಖಿಲ ಭಾರತ ಬಿಲ್ಲವರ ಯೂನಿಯನ್ ಅಧ್ಯಕ್ಷ ನವೀನ್ ಚಂದ್ರ ಡಿ ಸುವರ್ಣ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಮಾಜಿ ಸಚಿವ ವಿನಯಕುಮಾರ್ ಸೊರಕೆ, ರಾಷ್ಟ್ರೀಯ ಬಿಲ್ಲವರ ಮಹಾಮಂಡಲ ಮುಲ್ಕಿ ಅಧ್ಯಕ್ಷ ರಾಜಶೇಖರ ಕೋಟ್ಯಾನ್, ಅಖಿಲ ಭಾರತ ಬಿಲ್ಲವರ ಮಹಿಳಾ ಸಂಘದ ಅಧ್ಯಕ್ಷೆ ಸುಮಲತಾ ಎನ್. ಸುವರ್ಣ, ಬಿಜೆಪಿ ಜಿಲ್ಲಾಧ್ಯಕ್ಷ ಸುದರ್ಶನ್ ಎಂ ಉಪಸ್ಥಿತರಿದ್ದರು.
ಕಟ್ಟಡ ಸಮಿತಿ ಉಪಾಧ್ಯಕ್ಷ ಗೋಪಿನಾಥ ಪಡಂಗ ಸ್ವಾಗತಿಸಿದರು. ಹರಿಣಾಕ್ಷಿ ಸುವರ್ಣ ಧನ್ಯವಾದ ಅರ್ಪಿಸಿದರು. ಪ್ರವೀಣ್ ಎಸ್ ಕುಂಪಾಲ ಕಾರ್ಯಕ್ರಮ ನಿರೂಪಿಸಿದರು. ಬಳಿಕ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಿತು.
Kshetra Samachara
22/05/2022 10:40 pm