ಉಡುಪಿ: ಜಿಲ್ಲೆಯಾದ್ಯಂತ ಇವತ್ತು ವರಮಹಾಲಕ್ಷ್ಮೀ ಹಬ್ಬವನ್ನು ಬಹಳ ಭಕ್ತಿ- ಸಂಭ್ರಮದಿಂದ ಆಚರಿಸಲಾಗುತ್ತಿದೆ. ದೇವಾಲಯಗಳಲ್ಲಿ ವಿಶೇಷ ಪೂಜೆಗಳು ಸಂಪನ್ನಗೊಳ್ಳುತ್ತಿವೆ.
ಶ್ರಾವಣ ಮಾಸದ ಎರಡನೇ ಶುಕ್ರವಾರದಂದು ಲಕ್ಷ್ಮೀ ಪೂಜೆ ಮಾಡಿ ಮನೆಯಲ್ಲಿ ಲಕ್ಷ್ಮೀಯನ್ನು ಕೂರಿಸಿ ಆರಾಧನೆ ಮಾಡಲಾಗುತ್ತದೆ. ವರಮಹಾಲಕ್ಷ್ಮೀ ಹಬ್ಬ ಮಹಿಳೆಯರ ಅಚ್ಚುಮೆಚ್ಚಿನ ಹಬ್ಬ. ಅದರಂತೆ ಹಬ್ಬವನ್ನು ತಮ್ಮ ಮನೆಗಳಲ್ಲೂ ಆಚರಣೆ ಮಾಡುತ್ತಾರೆ. ನಗರದ ದೇವಾಲಯಗಳಲ್ಲಿ ಪೂಜೆಗಾಗಿ ಭಕ್ತರ ದಂಡೇ ಆಗಮಿಸಿದೆ. ಉಡುಪಿ ಸಮೀಪದ ಕಟಪಾಡಿ ಶ್ರೀ ವಿಶ್ವನಾಥ ಕ್ಷೇತ್ರದಲ್ಲಿ ವರಮಹಾಲಕ್ಷ್ಮಿ ಪೂಜೆ ವೈಭವದಿಂದ ಜರುಗಿತು. ಪ್ರಧಾನ ಅರ್ಚಕರಾದ ದೇವದಾಸ ಶಾಂತಿ ನೇತೃತ್ವದಲ್ಲಿ ವಿಶೇಷ ಪೂಜೆ ಪುನಸ್ಕಾರಗಳು ಸಂಪನ್ನಗೊಂಡವು. ನೂರಾರು ಮಹಿಳೆಯರು ಪೂಜೆಯಲ್ಲಿ ಪಾಲ್ಗೊಂಡು ಪುನೀತರಾದರು.
Kshetra Samachara
05/08/2022 03:04 pm