ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ವಿಟ್ಲ: ಶ್ರೀಧಾಮ ಮಾಣಿಲದಲ್ಲಿ ಶ್ರೀ ವರಮಹಾಲಕ್ಷ್ಮೀ ವ್ರತಾಚರಣೆ, ಶ್ರೀನಿವಾಸ ಕಲ್ಯಾಣೋತ್ಸವ

ವಿಟ್ಲ: ಶ್ರೀಧಾಮ ಮಾಣಿಲ ಶ್ರೀ ಮಹಾಲಕ್ಷ್ಮಿ ಕ್ಷೇತ್ರದಲ್ಲಿ ಸಾಮೂಹಿಕ ಶ್ರೀ ವರಮಹಾಲಕ್ಷ್ಮೀ ವ್ರತಾಚರಣೆ ಪೂಜೆ ಹಾಗೂ ಶ್ರೀನಿವಾಸ ಕಲ್ಯಾಣೋತ್ಸವ ಜರುಗಿತು.

ಈ ಸಂದರ್ಭ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿ ಆಶೀರ್ವಚನ ನೀಡಿ, ಲೋಕ ಕಲ್ಯಾಣಕ್ಕಾಗಿ ಭಿಕ್ಷೆ ಬೇಡುವುದರಲ್ಲಿ ಅಸಹ್ಯ ಪಡಬಾರದು. ಭಗವಂತನ ಸಾಮ್ರಾಜ್ಯದಲ್ಲಿ ಎಲ್ಲರೂ ಸಮಾನರು. ನಿಸರ್ಗವನ್ನು ಪ್ರೀತಿಸುವ ಕಾರ್ಯ ಎಲ್ಲರಿಂದಲೂ ನಡೆಯಬೇಕು ಎಂದರು. ಅಪ್ಪಣ್ಣ ಆಚಾರ್ಯ ನೇತೃತ್ವದಲ್ಲಿ ಶ್ರೀನಿವಾಸ ಕಲ್ಯಾಣೋತ್ಸವ ಜರುಗಿತು.

ರೇಖಾ ದೇಸಾಯಿ ಬೆಳಗಾವಿ, ಡಾ.ವಿ.ಕೆ. ಹೆಗ್ಡೆ ಅವರನ್ನು ಸನ್ಮಾನಿಸಲಾಯಿತು. ಉದ್ಯಮಿ ಕಿಶೋರ್ ಶೇಖರ್ ಅವರನ್ನು ಗೌರವಿಸಲಾಯಿತು. ಮಾಜಿ ಸಚಿವ ಬಿ. ನಾಗರಾಜ ಶೆಟ್ಟಿ, ಪುತ್ತೂರು ಶಾಸಕ ಸಂಜೀವ ಮಠಂದೂರು, ನಿತ್ಯಾನಂದ ಆಶ್ರಮದ ಆಡಳಿತ ಮೊಕ್ತೇಸರ ದಿವಾಕರ ಶೆಟ್ಟಿ ಕೊಡವೂರು, ಡಾ. ಹರೀಶ್ ಕೊಟ್ಟಾರಿ ಮತ್ತಿತರರು ಉಪಸ್ಥಿತರಿದ್ದರು.

Edited By : Manjunath H D
Kshetra Samachara

Kshetra Samachara

05/08/2022 08:35 pm

Cinque Terre

5.2 K

Cinque Terre

0

ಸಂಬಂಧಿತ ಸುದ್ದಿ