ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಉಡುಪಿ: ಕೃಷ್ಣಮಠದ ಗಣಪನ ವರ್ಣರಂಜಿತ ವಿಸರ್ಜನೆ: ಮಠಾಧೀಶರು ಭಾಗಿ

ಉಡುಪಿ: ಉಡುಪಿ ಶ್ರೀಕೃಷ್ಣಮಠದಲ್ಲಿ ವರ್ಷಂಪ್ರತಿಯಂತೆ ಈ ಬಾರಿಯೂ ಗಣಪನನ್ನು ಪ್ರತಿಷ್ಠಾಪಿಸಲಾಗಿತ್ತು. ಗಣೇಶ ಚತುರ್ಥಿ ಹಬ್ಬದ ಪ್ರಯುಕ್ತ ಪ್ರತಿಷ್ಠೆಗೊಂಡ ಗಣಪತಿ ವಿಸರ್ಜನೆಯು ಪರ್ಯಾಯ ಕೃಷ್ಣಾಪುರ ಮಠಾಧೀಶರಾದ ಶ್ರೀ ವಿದ್ಯಾಸಾಗರತೀರ್ಥ ಶ್ರೀಪಾದರ ನೇತೃತ್ವದಲ್ಲಿ ನಡೆಯಿತು.

ಇದಕ್ಕೂ ಮುನ್ನ ರಥಬೀದಿಯಲ್ಲಿ ಆಕರ್ಷಕ ಮೆರವಣಿಗೆ ನಡೆದು, ವಿವಿಧ ವೇಷಧಾರಿಗಳು ಧಾರ್ಮಿಕ ಕಾರ್ಯಕ್ರಮಕ್ಕೆ ಕಳೆ ತಂದರು. ಮಠದ ಮಧ್ವ ಸರೋವರದಲ್ಲಿ ವಿಘ್ನ ನಿವಾರಕನ ಜಲಸ್ತಂಭನ ವಿಜೃಂಭಣೆಯಿಂದ ನಡೆಯಿತು. ಕಾಣಿಯೂರು ಮಠಾಧೀಶರಾದ ಶ್ರೀವಿದ್ಯಾವಲ್ಲಭತೀರ್ಥ ಶ್ರೀಪಾದರ ಸಹಿತ ಹಲವರು ಉಪಸ್ಥಿತರಿದ್ದರು.

Edited By : Nagaraj Tulugeri
Kshetra Samachara

Kshetra Samachara

03/09/2022 08:31 pm

Cinque Terre

7.31 K

Cinque Terre

0

ಸಂಬಂಧಿತ ಸುದ್ದಿ