ಮುಲ್ಕಿ: ಕಿನ್ನಿಗೋಳಿ ಸಾರ್ವಜನಿಕ ಶ್ರೀ ಶಾರದಾ ಮಹೋತ್ಸವ ಸಮಿತಿ ವತಿಯಿಂದ ಕಿನ್ನಿಗೋಳಿಯ ಶ್ರೀ ಶಾರದಾ ಮಂಟಪದಲ್ಲಿ ಪ್ರತಿಷ್ಠಾಪಿಸಲ್ಪಟ್ಟ ಸಪ್ತಮ ವರ್ಷದ ಶ್ರೀ ಶಾರದಾ ಮಾತೆಯ ವಿಸರ್ಜನಾ ಶೋಭಾಯಾತ್ರೆ ಗುರುವಾರ (ಇಂದು) ವಿಜೃಂಭಣೆಯಿಂದ ನಡೆಯಿತು.
ಗುರುವಾರ ಬೆಳಿಗ್ಗೆ 8 ರಿಂದ ಮಧ್ಯಾಹ್ನ 2ರವರೆಗೆ – ಭಜನಾ ಕಾರ್ಯಕ್ರಮ,ಸಂಜೆ 4ಕ್ಕೆ ವಿಸರ್ಜನಾ ಪೂಜೆ ನಡೆದು
ಸಂಜೆ 4.30ಕ್ಕೆ ಕಿನ್ನಿಗೋಳಿಯಿಂದ ಶೋಭಾ ಯಾತ್ರೆ ಮೂಲಕ ಕಟೀಲು ನಂದಿನಿ ನದಿಯಲ್ಲಿ ಶಾರದಾ ಮಾತೆಯ ವಿಸರ್ಜನೆ ಕಾರ್ಯಕ್ರಮ ನಡೆಯಿತು.
ಈ ಸಂದರ್ಭ ಶಾಸಕ ಉಮನಾಥ ಕೋಟ್ಯಾನ್, ಜಾಗತಿಕ ಬಂಟರ ಸಂಘದ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ, ಬಿಲ್ಲವ ಮಹಾಮಂಡಲದ ಅಧ್ಯಕ್ಷ ರಾಜಶೇಖರ ಕೋಟ್ಯಾನ್, ಸತ್ಯಜಿತ್ ಸುರತ್ಕಲ್ ಮತ್ತಿತರರು ಭೇಟಿ ನೀಡಿ ಪ್ರಸಾದ ಸ್ವೀಕರಿಸಿದರು
ಕಿನ್ನಿಗೋಳಿ ಶ್ರೀ ಶಾರದೋತ್ಸವ ಸಮಿತಿಯ ಅಧ್ಯಕ್ಷ ಸುಬ್ರಮಣ್ಯ ಶಣೈ,ಭಕ್ತಾದಿಗಳು ಉಪಸ್ಥಿತರಿದ್ದರು.
Kshetra Samachara
06/10/2022 06:46 pm