ಕಾಪು: ಶ್ರೀ ಹಳೇ ಮಾರಿಯಮ್ಮ ದೇವಸ್ಥಾನದಲ್ಲಿ ಶರನ್ನವರಾತ್ರಿಯ ಪ್ರಯುಕ್ತ ಚಂಡಿಕಾಯಾಗ ಪೂರ್ಣಾಹುತಿ ಮತ್ತು ಅನ್ನಸಂತರ್ಪಣೆ ನಡೆಯಿತು.
ಹಳೇ ಮಾರಿಗುಡಿಯ ಅರ್ಚಕ ವೇ| ಮೂ| ಕಮಲಾಕ್ಷ ಭಟ್ ಅವರ ನೇತೃತ್ವದಲ್ಲಿ ವೈದಿಕ ವೃಂದದ ಸಹಭಾಗಿತ್ವದೊಂದಿಗೆ ಚಂಡಿಕಾಯಾಗ ಪೂರ್ಣಾಹುತಿಯ ಧಾರ್ಮಿಕ ಕಾರ್ಯಕ್ರಮಗಳು ನೆರವೇರಿದವು. ಬಳಿಕ ಹಾಲು ಪಾಯಸ ಸಹಿತವಾಗಿ ಅನ್ನಸಂತರ್ಪಣೆ ನಡೆಯಿತು.
ಸಂಜೆ ಶ್ರೀ ಮಾರಿಯಮ್ಮ ದೇವಿಯ ದರ್ಶನ ಸೇವೆ ನಡೆದು ಭಕ್ತರಿಗೆ ಅನುಗ್ರಹ ಪ್ರಸಾದ ವಿತರಿಸಲಾಯಿತು. ಸಾವಿರಾರು ಭಕ್ತರು ಅನ್ನ ಪ್ರಸಾದ ಸ್ವೀಕರಿಸಿ ದೇವಿಯ ಕೃಪೆಗೆ ಪಾತ್ರರಾದರು.
ಕಾಪು ಹಳೇ ಮಾರಿಗುಡಿ ದೇವಸ್ಥಾನದ ಆಡಳಿತ ಮೊಕ್ತೇಸರ ಅಧ್ಯಕ್ಷ ಕೆ. ಪ್ರಸಾದ್ ಗೋಕುಲ್‌ದಾಸ್ ಶೆಣೈ, ಮಾಜಿ ಆಡಳಿತ ಮೊಕ್ತೇಸರ ಶ್ರೀಧರ ಆನಂದರಾಯ ಶೆಣೈ, ಮೊಕ್ತೇಸರರಾದ ಸದಾಶಿವ ರಾಧಾಕೃಷ್ಣ ಕಾಮತ್, ರಾಜೇಶ್ ಮಾಧವರಾಯ ಶೆಣೈ, ರಾಮ ಶಶಿಧರ ನಾಯಕ್, ಶ್ರೀಕಾಂತ ಲಕ್ಷ್ಮೀನಾರಾಯಣ ಭಟ್ ಮತ್ತಿತರರು ಉಪಸ್ಥಿತರಿದ್ದರು.
Kshetra Samachara
11/10/2022 08:35 pm