ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಧರ್ಮಸ್ಥಳ: ಶ್ರೀ ಮಂಜುನಾಥ ಸ್ವಾಮಿ ಸನ್ನಿಧಿ ಈಗ ಸುಂದರ ಪುಷ್ಪಲೋಕ!; ಬೆಂಗಳೂರಿನ ಕುಟುಂಬದ ನವವರ್ಷದ ಸೇವೆ

ಮಂಗಳೂರು: ಹೊಸ ವರ್ಷದ ಪ್ರಯುಕ್ತ ಧರ್ಮಸ್ಥಳದಲ್ಲಿ ವಿಶೇಷ ಹೂವಿನ ಅಲಂಕಾರ ಮಾಡಲಾಗಿದೆ.

ಹೊಸ ವರ್ಷಾಚರಣೆಗೆ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ನಾಡಿನೆಲ್ಲೆಡೆಯಿಂದ ಭಕ್ತರು ಸಹಸ್ರಾರು ಸಂಖ್ಯೆಯಲ್ಲಿ ಆಗಮಿಸಿ ಶ್ರೀ ಮಂಜುನಾಥ ಸ್ವಾಮಿಯ ದರ್ಶನ ಪಡೆಯುತ್ತಾರೆ. ಈ ಸುಸಂದರ್ಭದಲ್ಲಿ ಬೆಂಗಳೂರಿನ ಕುಟುಂಬವೊಂದು ಕಳೆದ 12 ವರ್ಷಗಳಿಂದ ಸ್ವಾಮಿ ಸನ್ನಿಧಾನದಲ್ಲಿ ಹೂವಿನ ಅಲಂಕಾರ ಸೇವೆ ಮಾಡುತ್ತಿದ್ದು, ಈ ವರ್ಷವೂ ವಿಶೇಷವಾಗಿ ಅಲಂಕಾರ ಮಾಡಿದೆ. ದಾಳಿಂಬೆ, ಅನಾನಸು ಸೇರಿದಂತೆ ಭತ್ತದ ತೆನೆ, ಕಬ್ಬು, ತೆಂಗಿನ ಗರಿ, ಬಾಳೆ ದಿಂಡು, ತಾವರೆ, ಲಿಲಿಯಂ, ಜಮೈಕಾನ್ ಎಲೆ, ಆಂತೋರಿಯಂ, ಕ್ರಿಸಾಂಟಮೊ ಸಹಿತ 6 ಲೋಡ್ ಅಲಂಕಾರಿಕ ಸಾಮಗ್ರಿಗಳನ್ನು ಬಳಸಿ ದೇವಸ್ಥಾನದ ಹೊರಾಂಗಣದ ದ್ವಾರ, ಸುತ್ತು ಪೌಳಿ, ಛಾವಣಿ ಸ್ತಂಭಗಳನ್ನು ವಿಭಿನ್ನವಾಗಿ ಆಕರ್ಷಕವಾಗಿ ಸಿಂಗರಿಸಲಾಗಿದ್ದು, ಕಣ್ಮನ ಸೆಳೆಯುತ್ತಿದೆ.

Edited By : Nagesh Gaonkar
Kshetra Samachara

Kshetra Samachara

01/01/2021 11:52 am

Cinque Terre

18.64 K

Cinque Terre

1

ಸಂಬಂಧಿತ ಸುದ್ದಿ