ಮಂಗಳೂರು: ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿಯ 2020ನೇ ಸಾಲಿನ ಗೌರವ ಪುರಸ್ಕಾರವನ್ನು ವೈದ್ಯಕೀಯ ಕ್ಷೇತ್ರದಲ್ಲಿ ಸಾಧನೆಗೈದಿರುವ ಡಾ.ಇಸ್ಮಾಯಿಲ್ ಹೆಜಮಾಡಿ ಅವರಿಗೆ ಇಂದು ಪ್ರದಾನ ಮಾಡಲಾಯಿತು.
ಕೊರೊನಾ ವಾರಿಯರ್ ಆಗಿ ಸೇವೆ ಸಲ್ಲಿಸಿರುವ ಹಿನ್ನೆಲೆಯಲ್ಲಿ ಈ ಪ್ರಶಸ್ತಿ ಪುರಸ್ಕಾರ ಮಾಡಲಾಯಿತು. ಡಾ.ಇಸ್ಮಾಯಿಲ್ ಅವರಿಗೆ ಬೆಂಗಳೂರಿನಲ್ಲಿ ಇತ್ತೀಚೆಗೆ ನಡೆದ ಕಾರ್ಯಕ್ರಮಕ್ಕೆ ಬರಲು ಅನಾನುಕೂಲವಾಗಿರುವ ಹಿನ್ನೆಲೆಯಲ್ಲಿ ಮಂಗಳೂರಲ್ಲಿ ಇಂದು ಸನ್ಮಾನಿಸಲಾಯಿತು.
ಗೌರವ ಪುರಸ್ಕಾರ ಸ್ವೀಕರಿಸಿ ಡಾ.ಇಸ್ಮಾಯಿಲ್ ಮಾತನಾಡಿ, ಈ ಪ್ರತಿಷ್ಠಿತ ಪುರಸ್ಕಾರ ಪಡೆದಿರುವುದರಿಂದ ನನ್ನ ಜವಾಬ್ದಾರಿ ಹೆಚ್ಚಾಗಿದ್ದು, ಮುಂದೆಯೂ ಪ್ರಾಮಾಣಿಕವಾಗಿ ವೈದ್ಯಕೀಯ ಕ್ಷೇತ್ರದಲ್ಲಿ ಸೇವೆ ಸಲ್ಲಿಸುತ್ತೇನೆ. ಗೌರವ ಪುರಸ್ಕಾರ ನೀಡಿದ ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿ ಮತ್ತು ಕರ್ನಾಟಕ ಸರ್ಕಾರಕ್ಕೆ ಕೃತಜ್ಞತೆ ಸಲ್ಲಿಸುತ್ತೇನೆ ಎಂದರು.
ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ರಹೀಂ ಉಚ್ಚಿಲ್, ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿ ಸದಸ್ಯ ಶಂಶೀರ್ ಬುಡೋಳಿ, ಡಾ.ನಜೀಬ್ ಬೆಝಾದ್, ರಮೇಶ್ ಭಟ್,
ವಿಜಯ್, ಬಶೀರ್ ಉಪಸ್ಥಿತರಿದ್ದರು.
Kshetra Samachara
02/01/2021 07:05 pm