ಉಡುಪಿ: ಉಡುಪಿ ಜಿಲ್ಲೆ ಬೈಂದೂರು ತಾಲೂಕಿನ ಕೊಲ್ಲೂರು ಶ್ರೀ ಮೂಕಾಂಬಿಕೆ ದೇವಸ್ಥಾನದಲ್ಲಿ 'ಸಪ್ತಪದಿ' ಉಚಿತ ಸಾಮೂಹಿಕ ವಿವಾಹ ನಡೆಯಿತು.
ಕರ್ನಾಟಕ ಸರ್ಕಾರ ಧಾರ್ಮಿಕ ದತ್ತಿ ಇಲಾಖೆ ಹಾಗೂ ಕೊಲ್ಲೂರು ಶ್ರೀ ಮೂಕಾಂಬಿಕೆ ದೇವಸ್ಥಾನ ವತಿಯಿಂದ ಸರಳವಾಗಿ ವಿವಾಹ ನಡೆಯಿತು.ಒಟ್ಟು ನಾಲ್ಕು ಜೋಡಿ ನವ ದಂಪತಿ ಸಪ್ತಪದಿ ತುಳಿದು ಹೊಸ ಜೀವನಕ್ಕೆ ಪದಾರ್ಪಣೆ ಮಾಡಿದರು.
ದೇವಸ್ಥಾನದ ವತಿಯಿಂದ ವರನಿಗೆ ಐದು ಸಾವಿರ ರೂ. ಮತ್ತು ವಧುವಿಗೆ 10 ಸಾವಿರ ರೂ. ನೀಡಿ ಗೌರವಿಸಲಾಯಿತು. ನವ ದಂಪತಿಗಳಿಗೆ ಶ್ರೀ ಮೂಕಾಂಬಿಕೆಗೆ ಪೂಜೆ ಮಾಡಿ ಮಂಗಲಸೂತ್ರ ನೀಡಲಾಯಿತು. ಬೈಂದೂರು ಶಾಸಕ ಸುಕುಮಾರ ಶೆಟ್ಟಿ ಕಾರ್ಯಕ್ರಮ ಉದ್ಘಾಟಿಸಿ, ವಧು-ವರರನ್ನು ಹರಸಿದರು.
ಬಳಿಕ ಮಾತನಾಡಿದ ಶಾಸಕರು, ತಾಯಿ ಶ್ರೀ ಮೂಕಾಂಬಿಕೆಯ ಸನ್ನಿಧಿಯಲ್ಲಿ ಮದುವೆ ಯಾಗುವುದೇ ಒಂದು ಪುಣ್ಯ. ದುಂದು ವೆಚ್ಚದ ಮದುವೆ ಕಡಿಮೆಯಾಗಬೇಕು, ಸರಳ ರೀತಿಯಲ್ಲಿ ಮದುವೆಯಾಗಿ ಸಮಾಜಕ್ಕೆ ಮಾದರಿಯಾಗಬೇಕು ಎಂದರು.
Kshetra Samachara
06/01/2021 11:40 am