ಮಂಗಳೂರು: ಸ್ವಾಮಿ ವಿವೇಕಾನಂದರ 158ನೇ ವರ್ಷದ ಜನ್ಮದಿನಾಚರಣೆಯ ಅಂಗವಾಗಿ ಬಿಜೆಪಿ ದ.ಕ.ಜಿಲ್ಲಾ ಯುವಮೋರ್ಚಾ ವತಿಯಿಂದ ನಡೆದ ಕಾಲ್ನಡಿಗೆ ಜಾಥಾವನ್ನು ಶಾಸಕ ವೇದವ್ಯಾಸ ಕಾಮತ್ ಉದ್ಘಾಟಿಸಿದರು.
ಸ್ವಾಮಿ ವಿವೇಕಾನಂದರ ಸಮರ್ಥ ಭಾರತ ಕಲ್ಪನೆಯಲ್ಲಿ ನಡೆದ ಕಾಲ್ನಡಿಗೆ ಜಾಥಾ ನಗರದ ನವಭಾರತ ವೃತ್ತದಿಂದ ಹೊರಟು ಕದ್ರಿ ಮೈದಾನದಲ್ಲಿ ಕೊನೆಗೊಂಡಿತು.
ವಿಧಾನ ಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್, ಮನಪಾ ಸದಸ್ಯರಾದ ಸುಧೀರ್ ಕುಮಾರ್ ಶೆಟ್ಟಿ, ಶಕೀಲಾ ಕಾವಾ, ಶ್ವೇತಾ ಪ್ರಸಾದ್, ದ.ಕ.ಜಿಲ್ಲಾ ಬಿಜೆಪಿ ಯುವ ಮೋರ್ಚಾ ಸದಸ್ಯರು ಸೇರಿದಂತೆ ಸುಮಾರು 500ಕ್ಕೂ ಅಧಿಕ ಮಂದಿ ಜಾಥಾದಲ್ಲಿ ಪಾಲ್ಗೊಂಡಿದ್ದರು.
Kshetra Samachara
10/01/2021 12:10 pm