ಉಡುಪಿ: ಇತಿಹಾಸ ಪ್ರಸಿದ್ಧ ಪಣಿಯಾಡಿ ಶ್ರೀ ಅನಂತ ಪದ್ಮನಾಭ ದೇವಸ್ಥಾನದ ಜೀರ್ಣೋದ್ಧಾರ ಕಾರ್ಯಕ್ಕೆ ಚಾಲನೆ ನೀಡಲಾಯಿತು.
ಉಡುಪಿ ಪುತ್ತಿಗೆ ಮಠಾಧೀಶ ಶ್ರೀ ಸುಗುಣೇಂದ್ರ ತೀರ್ಥ ಸ್ವಾಮೀಜಿ ನೇತೃತ್ವದಲ್ಲಿ ಜೀರ್ಣೋದ್ದಾರಕ್ಕೆ ಮುನ್ನ ನಡೆಯುವ ಧಾರ್ಮಿಕ ವಿಧಿವಿಧಾನಗಳು, ವಿಶೇಷ ಪೂಜೆ , ಹೋಮ ಹವನಗಳು ನಡೆದವು.
ಸುಮಾರು 5 ಕೋಟಿ ರೂ. ವೆಚ್ಚದಲ್ಲಿ ದೇವಸ್ಥಾನದ ಗರ್ಭಗುಡಿ, ಸುತ್ತುಪೌಳಿ, ತೀರ್ಥ ಮಂಟಪ ದೇಗುಲದ ಸರೋವರ ನೂತನವಾಗಿ ನಿರ್ಮಾಣ ಆಗಲಿದ್ದು, ಮೇ ತಿಂಗಳಲ್ಲಿ ಕಾಮಗಾರಿ ಪೂರ್ಣಗೊಳ್ಳಲಿದೆ. ಬ್ರಹ್ಮಕಲಶೋತ್ಸವ ತನಕ ಶ್ರೀ ಅನಂತಪದ್ಮನಾಭ ದೇವರಿಗೆ ಬಾಲ ಆಲಯದಲ್ಲಿ ಪೂಜೆ-ಪುನಸ್ಕಾರ ನಡೆಯಲಿವೆ.
Kshetra Samachara
22/01/2021 07:18 pm