ಮುಲ್ಕಿ: ಪುನರೂರು ಪ್ರತಿಷ್ಠಾನ ( ರಿ ) ಆಶ್ರಯದಲ್ಲಿ ಪುನರೂರು ಶ್ರೀ ವಿಶ್ವನಾಥ ದೇವಳದ ವಠಾರದಲ್ಲಿ ಪುನರೂರು ಸಂಭ್ರಮ ನಡೆಯಿತು.ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಳದ ಪ್ರಧಾನ ಅರ್ಚಕ ರಾಜೇಶ ಆಸ್ರಣ್ಣ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ ಪುನರೂರು ಪ್ರತಿಷ್ಠಾನದಿಂದ ಮಕ್ಕಳಿಗೆ ಸಂಸ್ಕಾರ ಹಾಗೂ ಸಂಸ್ಕೃತಿ ತಿಳಿಸುವ ಕೆಲಸ ಆಗುತ್ತಿರುವುದು ಶ್ಲಾಘನೀಯ ಎಂದರು..
ಕಟೀಲು ದೇವಳದ ಅರ್ಚಕ ಲಕ್ಷ್ನೀನಾರಾಯಣ ಆಸ್ರಣ್ಣ ಶುಭಾಶಂಸನೆಗೈದು ಮಾತನಾಡಿ ಮಕ್ಕಳಲ್ಲಿ ಅಡಗಿರುವ ಸೂಕ್ತ ಪ್ರತಿಭೆಯನ್ನು ಗುರುತಿಸಿ ಜನಹಿತ ಕಾರ್ಯಕ್ರಮಗಳನ್ನು ಸಂಘಟಿಸಿ ಸಮಾಜಕ್ಕೆ ಉತ್ತಮ ಸಂದೇಶ ನೀಡುತ್ತಿರುವ ಸಂಘಟನೆಯ ಕಾರ್ಯವೈಖರಿ ಅಭಿನಂದನೀಯ ಎಂದರು.
ಸಮಾರಂಭದ ಅಧ್ಯಕ್ಷತೆಯನ್ನು ಧರ್ಮದರ್ಶಿ ಹರಿಕೃಷ್ಣ ಪುನರೂರು ವಹಿಸಿ ಮಾತನಾಡಿ ಕೆರೆಯ ನೀರನ್ನು ಕೆರೆಗೆ ಚೆಲ್ಲಿ ಎಂಬಂತೆ ಪುನರೂರು ಪ್ರತಿಷ್ಠಾನದಿಂದ ಸಮಾಜದಲ್ಲಿರುವ ಬಡವರ ಕಣ್ಣೀರು ಒರೆಸುವ ಕೆಲಸವಾಗುತ್ತಿರುವುದು ಶ್ಲಾಘನೀಯ ಎಂದರು.
ಸಮಾರಂಭದ ಮುಖ್ಯ ಅತಿಥಿಗಳಾಗಿ ಬಜಪೆ ಧಂಡರ್‌ಗೈಸ್ ಫೌಂಡೇಶನ್ ಸಂಸ್ಥೆಯ ಅಧ್ಯಕ್ಷ ಸೂರಜ್ ಶೆಟ್ಟಿ ಬಜಪೆ, ಧಾರ್ಮಿಕ ಪರಿಷತ್ ಸದಸ್ಯ ಕೊಡೆತ್ತೂರು ಭುವನಾಭಿರಾಮ ಉಡುಪ, ಪುನರೂರು ದೇವಳದ ಆಡಳಿತ ಮೊಕ್ತೇಸರ ಪಟೇಲ್ ವಾಸುದೇವ ರಾವ್,ಪುನರೂರು ಪ್ರತಿಷ್ಠಾನದ ಗೌರವಾಧ್ಯಕ್ಷೆ ಎಚ್. ಕೆ. ಉಷಾರಾಣಿ, ಕಿನ್ನಿಗೋಳಿ ಯಕ್ಷಲಹರಿ (ರಿ) ಅಧ್ಯಕ್ಷರಾದ ರಘುನಾಥ ಕಾಮತ್ ಕೆಂಚನಕೆರೆ,ಪುನರೂರು ಪ್ರತಿಷ್ಠಾನ (ರಿ) ಅಧ್ಯಕ್ಷ ದೇವಪ್ರಸಾದ್ ಪುನರೂರು, ಪ್ರಧಾನ ಕಾರ್ಯದರ್ಶಿ ಶ್ರೇಯಾ ಪುನರೂರು, ಜನ ವಿಕಾಸ ಸಮಿತಿ ಅಧ್ಯಕ್ಷರಾದ ಜೀವನ ಶೆಟ್ಟಿ, ಪದಾಧಿಕಾರಿಗಳಾದ ಪ್ರಾಣೇಶ್ ಭಟ್ ದೇಂದಡ್ಕ, ಜಿತೇಂದ್ರ ವಿ ರಾವ್ ಹೆಜಮಾಡಿ, ಸುರೇಶ್ ರಾವ್ ನೀರಳಿಕೆ ಮತ್ತಿತರರು ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ಪ್ರತಿಷ್ಠಾನದ ವತಿಯಿಂದ 2020 21 ನೇ ಸಾಲಿನ ಲ್ಲಿ ಮುಲ್ಕಿ ಹೋಬಳಿಯ ಶಾಲಾ ವಿದ್ಯಾರ್ಥಿಗಳಿಗೆ ನಡೆಸಿದ ಪ್ರತಿಭಾ ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಬಹುಮಾನಗಳನ್ನು ವಿತರಿಸಲಾಯಿತು. ಪುನರೂರು ಪ್ರತಿಷ್ಠಾನದ ಅಧ್ಯಕ್ಷ ದೇವಪ್ರಸಾದ್ ಪುನರೂರು ಸ್ವಾಗತಿಸಿದರು, ಜಿತೇಂದ್ರ ಯು ರಾವ್ ನಿರೂಪಿಸಿದರು. ಬಳಿಕ ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ ಬಜಪೆ ಥಂಡರ್‌ಗೈಸ್ ಸಂಸ್ಥೆಯಿಂದ ಕ್ಷೇತ್ರ ಪುರಾಣ ಮಂಜರಿ ಭಕ್ತಿ ಭಾವದ ನೃತ್ಯ ಸಂಗಮ ನಡೆಯಿತು.
Kshetra Samachara
24/01/2021 07:02 pm