ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಉಡುಪಿ: ಗಣರಾಜ್ಯೋತ್ಸವದಲ್ಲಿ ಕಣ್ಮನ ಸೆಳೆದ ಸಾಂಸ್ಕೃತಿಕೋತ್ಸವ; ಸಾಧಕರಿಗೆ ಸನ್ಮಾನ

ಉಡುಪಿ: ಉಡುಪಿಯ ಅಜ್ಜರಕಾಡಿನಲ್ಲಿ 72ನೇ ಗಣರಾಜ್ಯೋತ್ಸವ ಆಚರಣೆ ಕಾರ್ಯಕ್ರಮದಲ್ಲಿ ಸಾಂಸ್ಕೃತಿಕೋತ್ಸವ ವಿಶೇಷ ಕಳೆ ತಂದಿತು.

ವಿವಿಧ ಕಾಲೇಜುಗಳ ವಿದ್ಯಾರ್ಥಿ- ವಿದ್ಯಾರ್ಥಿನಿಯರು ಆಕರ್ಷಕ ಸಾಂಸ್ಕೃತಿಕ ಕಾರ್ಯಕ್ರಮದ ಮೂಲಕ ನೆರೆದ ಜನರನ್ನು ರಂಜಿಸಿದರು. ಎಂಜಿಎಂ ಕಾಲೇಜಿನ ವಿದ್ಯಾರ್ಥಿನಿಯರು ನಡೆಸಿಕೊಟ್ಟ ನೃತ್ಯ ರೂಪಕವು ಪ್ರೇಕ್ಷಕರ ಮನಸೂರೆಗೊಂಡಿತು.

ಇದೇ ಸಂದರ್ಭ ಕೃಷಿ ಸಾಧಕರು, ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳು ಮತ್ತು ಸಾಧನೆ ಮಾಡಿದ ಶಿಕ್ಷಕರನ್ನು ಸನ್ಮಾನಿಸಲಾಯಿತು. ಮೀನುಗಾರಿಕೆ ಸಚಿವ ಅಂಗಾರ ಅವರು ಸಾಧಕರನ್ನು ಸನ್ಮಾನಿಸಿದರು.

Edited By : Manjunath H D
Kshetra Samachara

Kshetra Samachara

26/01/2021 11:58 am

Cinque Terre

8.83 K

Cinque Terre

0