ಮುಲ್ಕಿ: ಪಕ್ಷಿಕೆರೆ ಶ್ರೀ ವಿನಾಯಕ ಮಿತ್ರ ಮಂಡಳಿ(ರಿ) ನೇತೃತ್ವದಲ್ಲಿ ಯುವ ಕಾರ್ಯ ಮತ್ತು ಕ್ರೀಡಾ ಸಚಿವಾಲಯ, ನೆಹರು ಯುವ ಕೇಂದ್ರ ಮಂಗಳೂರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಕೆಮ್ರಾಲ್ ಗ್ರಾಮ ಪಂಚಾಯತ್ ಜಂಟಿ ಆಶ್ರಯದಲ್ಲಿ ಗಣರಾಜ್ಯೋತ್ಸವ ದಿನಾಚರಣೆ ಮತ್ತು ಆರೋಗ್ಯ ನಿಧಿ ಧನ್ವಂತರಿಯ ಉದ್ಘಾಟನಾ ಸಮಾರಂಭ ಕೆಮ್ರಾಲ್ ಗ್ರಾಮ ಪಂಚಾಯಿತಿ ಸಭಾಭವನದಲ್ಲಿ ನಡೆಯಿತು,ಕಾರ್ಯಕ್ರಮದ ಅಧ್ಯಕ್ಷತೆಯನ್ನು ದ.ಕ.ಜಿಲ್ಲಾ ಪಂಚಾಯತ್ ಉಪಾಧ್ಯಕ್ಷರಾದ ಕಸ್ತೂರಿ ಪಂಜ ವಹಿಸಿದ್ದರು.
ವೇದಮೂರ್ತಿ ಪಂಜ ವಾಸುದೇವ ಭಟ್ ಕಾರ್ಯಕ್ರಮಕ್ಕೆ ಶುಭಾಶಂಶನೆ ನೀಡಿದರು, ಧನ್ವಂತರಿ ಆರೋಗ್ಯ ನಿಧಿ ಯ ಉದ್ಘಾಟನೆಯನ್ನು ಸುರಗಿರಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಆಡಳಿತ ಮೊಕ್ತೇಸರ ಸೀತಾರಾಮ್ ಶೆಟ್ಟಿ , ಪಕ್ಷಿಕೆರೆ ಸಾರ್ವಜನಿಕ ಗಣೇಶೋತ್ಸವ ಸಮಿತಿಯ ಗೌರವಾಧ್ಯಕ್ಷರಾದ ಶಾಂತರಾಮ್ ಶೆಟ್ಟಿ ನೆರವೇರಿಸಿದರು, ಈ ಸಂದರ್ಭದಲ್ಲಿ 267 ದಾನಿಗಳಿಂದ ಸಂಗ್ರಹಿಸಿದ .1,42,773 ರೂ ಧನ್ವಂತರಿ ಸಹಾಯ ನಿಧಿ ಯನ್ನು ಜ್ಞಾನೇಶ್ ಎಂಬ ಪುಟ್ಟ ಮಗುವಿಗೆ ದ.ಕ.ಜಿಲ್ಲಾ ಪಂಚಾಯತ್ ಸದಸ್ಯರಾದ ವಿನೋದ್ ಕುಮಾರ್ ಬೊಳ್ಳೂರು ಹಸ್ತಾಂತರಿಸಿದರು ಹಾಗೂ ರಾಮ ಪ್ರೆಂಡ್ಸ್ ಕಟೀಲು ಸಂಗ್ರಹಿಸಿದ ನಿಧಿ ಮೊತ್ತವನ್ನು ಜ್ನಾನೇಶ್ ಗೆ ಹಸ್ತಾಂತರಿಸಲಾಯಿತು. ತಾಲೂಕು ಪಂಚಾಯತ್ ಸದಸ್ಯರಾದ ಶುಭಲತಾ ಶೆಟ್ಟಿ, ನೆಹರು ಯುವ ಕೇಂದ್ರದ ಸಮನ್ವಯಾಧಿಕಾರಿಯಾದ ರಘುವೀರ್ ಸೂಟರ್ ಪೇಟೆ ಉಪಸ್ಥಿತರಿದ್ದರು. ಮಂಡಳಿಯ ಗೌರವಾಧ್ಯಕ್ಷರಾದ ಧನಂಜಯ ಪಿ ಶೆಟ್ಟಿಗಾರ್ ಸ್ವಾಗತಿಸಿದರು, ಪಂಚಾಯತ್ ಅಭಿವೃದ್ಧಿ ಅಧಿಕಾರಿಯಾದ ಅರುಣ್ ಪ್ರದೀಪ್ ಡಿಸೋಜ ಧನ್ಯವಾದ ಸಮರ್ಪಿಸಿದರು, ಕೆಮ್ರಾಲ್ ಗ್ರಾಮ ಪಂಚಾಯತಿಯ ನೂತನ ಚುನಾಯಿತ ಜನಪ್ರತಿನಿಧಿಗಳು, ಮಂಡಳಿಯ ಅಧ್ಯಕ್ಷರಾದ ಯಜ್ಞೇಶ್ ಪಿ ಶೆಟ್ಟಿಗಾರ್, ಮಂಡಳಿಯ ಸದಸ್ಯರು ಹಾಗೂ ಸ್ಥಳೀಯರು ಕಾರ್ಯಕ್ರಮದಲ್ಲಿ ಭಾಗವಹಿಸಿದರು.
Kshetra Samachara
26/01/2021 06:58 pm