ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮೂಡುಬಿದಿರೆ: ಸಾವಿರಕಂಬ ಬಸದಿಯಲ್ಲಿ ಸೇವಾರ್ಥ ಲಕ್ಷದೀಪೋತ್ಸವ

ಮೂಡುಬಿದಿರೆ: ಸಾವಿರಕಂಬದ ಬಸದಿಯಲ್ಲಿ ಮಾಜಿ ಸಚಿವ ಕೆ.ಅಭಯಚಂದ್ರ ಜೈನ್ ಅವರು ಕೊರೊನಾ ನಿವಾರಣೆಗೆ ಸಂಕಲ್ಪಿಸಿದಂತೆ ಸೇವಾರ್ಥವಾಗಿ ಮಂಗಳವಾರ ರಾತ್ರಿ ಲಕ್ಷದೀಪೋತ್ಸವ ನಡೆಯಿತು.

ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ. ವೀರೇಂದ್ರ ಹೆಗ್ಗಡೆ ಲಕ್ಷದೀಪೋತ್ಸವದಲ್ಲಿ ಪಾಲ್ಗೊಂಡು ಮಾತನಾಡಿ, ಮೂಡುಬಿದಿರೆಯಲ್ಲಿ ನೂರಾರು ವರ್ಷಗಳ ಹಿಂದೆಯೇ ಇಲ್ಲಿನ ರಾಜರು ಅಭೂತಪೂರ್ವ ವಾಸ್ತುಶಿಲ್ಪದ ಬಸದಿಗಳನ್ನು ನಿರ್ಮಿಸಿದ್ದು, ಇದರ ಹಿಂದೆ ಅವರ ಸಂಪತ್ತು ಮತ್ತು ಭಕ್ತಿಯ ವಿನಿಯೋಗವಾಗಿದೆ. ನಾವು ಜೀವನದಲ್ಲಿ ವೃತ್ತಿಯಿಂದ ಗಳಿಸಿದ ಸಂಪತ್ತನ್ನು ಹೇಗೆ ವಿನಿಯೋಗಿಸುತ್ತೇವೆ ಎಂಬುದು ಮುಖ್ಯ. ಮೋಜು ಮಸ್ತಿಗಳಿಗೆ ಸಂಪತ್ತನ್ನು ವಿನಿಯೋಗಿಸದೆ ಸತ್ಕಾರ್ಯಗಳಿಗೆ ವಿನಿಯೋಗಿಸಿದಾಗ ಯಶಸ್ಸು ಸಾಧ್ಯ ಎಂದರು.

ಜೈನಮಠದ ಸ್ವಸ್ತಿಶ್ರೀ ಭಟ್ಟಾರಕ ಚಾರುಕೀರ್ತಿ ಪಂಡಿತಾಚಾರ್ಯವರ್ಯ ಸ್ವಾಮೀಜಿ ಆಶೀರ್ವಚನ ನೀಡಿ, ದೇಶದಲ್ಲಿ ಕೊರೊನಾ ವ್ಯಾಪಿಸಿದ ಸಂದರ್ಭ ಜನರು ಸಂಕಷ್ಟಕ್ಕೀಡಾಗಿದ್ದು, ಸಂಪತ್ತು ನಷ್ಟದ ಜೊತೆಗೆ ಉದ್ಯೋಗದ ಅಸ್ಥಿರತೆ ಕಾಡಿತ್ತು. ಹಿಂದೆ ರಾಜರು ಅನಾರೋಗ್ಯಕ್ಕೆ ಈಡಾದಾಗಲೂ ಸಾವಿರ ಕಂಬದ ಬಸದಿಯ ಚಂದ್ರನಾಥ ಸ್ವಾಮಿಯಲ್ಲಿ ಪ್ರಾರ್ಥನೆ ಸಲ್ಲಿಸುತ್ತಿದ್ದರು. ಈಗ ಕೊರೊನಾಮುಕ್ತವಾಗಲು ಇಲ್ಲಿ ಲಕ್ಷದೀಪೋತ್ಸವದ ಸಂಕಲ್ಪ ನಡೆಸಿದ್ದು, ಈಡೇರಿದಂತಾಗಿದೆ ಎಂದರು.

ಧರ್ಮಸ್ಥಳದ ಹೇಮಾವತಿ ವಿ.ಹೆಗ್ಗಡೆ, ಮಾಜಿ ಸಚಿವ ಕೆ.ಅಭಯಚಂದ್ರ ಜೈನ್, ಎಸ್‍ಡಿಎಂ ಎಜ್ಯುಕೇಶನ್ ಸೊಸ್ಶೆಟಿಯ ಕಾರ್ಯದರ್ಶಿ ಡಾ.ಯಶೋವರ್ಮ, ಚೌಟರ ಅರಮನೆಯ ಕುಲದೀಪ ಎಂ., ಬಸದಿಗಳ ಮೊಕ್ತೇಸರ ಪಟ್ಟಣಶೆಟ್ಟಿ ಸುದೇಶ್ ಕುಮಾರ್, ಆನಡ್ಕ ದಿನೇಶ್ ಕುಮಾರ್ ಉಪಸ್ಥಿತರಿದ್ದರು.

Edited By : Nagesh Gaonkar
Kshetra Samachara

Kshetra Samachara

27/01/2021 02:40 pm

Cinque Terre

16.58 K

Cinque Terre

0

ಸಂಬಂಧಿತ ಸುದ್ದಿ