ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕಟಪಾಡಿ: ಗ್ರಾಪಂ ಸದಸ್ಯರಾಗಿ ಆಯ್ಕೆಯಾದ ವಿಶ್ವ ಬ್ರಾಹ್ಮಣ ಸಮಾಜ ಬಂಧುಗಳಿಗೆ ಅಭಿನಂದನೆ ಕಾರ್ಯಕ್ರಮ

ಮಂಗಳೂರು: ಕಟಪಾಡಿ ಪಡು ಕುತ್ಯಾರುನಲ್ಲಿರುವ ಶ್ರೀ ಮದ್ ಜಗದ್ಗುರು ಆನೆಗುಂದಿ ಮಹಾಸಂಸ್ಥಾನ ಸರಸ್ವತಿ ಪೀಠದಲ್ಲಿ

ಗ್ರಾಮ ಪಂಚಾಯಿತಿ ಸದಸ್ಯರಾಗಿ ಚುನಾಯಿತರಾದ ವಿಶ್ವ ಬ್ರಾಹ್ಮಣ ಸಮಾಜ ಬಂಧುಗಳಿಗೆ ಅಭಿನಂದನೆ ಸಮಾರಂಭ ಹಾಗೂ 2020-23ನೇ ಸಾಲಿನ ಪ್ರತಿಷ್ಠಾನದ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮ ಮಠದ ಸರಸ್ವತಿ ಸಭಾ ಭವನದಲ್ಲಿ ನಡೆಯಿತು.

ಆನೆಗುಂದಿ ಮಹಾಸಂಸ್ಥಾನ ಸರಸ್ವತಿ ಪೀಠದ ಜಗದ್ಗುರು ಅನಂತಶ್ರೀ ವಿಭೂಷಿತ ಕಾಳಹಸ್ತೇಂದ್ರ ಸರಸ್ವತೀ ಮಹಾ ಸ್ವಾಮೀಜಿಯವರು ಅನುಗ್ರಹ ಸಂದೇಶ ನೀಡಿದರು. ಅಧ್ಯಕ್ಷತೆಯನ್ನು ಆನೆಗುಂದಿ ಮಹಾಸಂಸ್ಥಾನ ಸರಸ್ವತಿ ಪೀಠ ಪ್ರತಿಷ್ಠಾನದ ಅಧ್ಯಕ್ಷ ಬಿ. ಸೂರ್ಯ ಕುಮಾರ್ ಅಚಾರ್ಯ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಕರ್ನಾಟಕ ರಾಜ್ಯ ವಿಶ್ವಕರ್ಮ ಸಮುದಾಯಗಳ ನಿಗಮ ಅಧ್ಯಕ್ಷ ಬಾಬು ಪತ್ತಾರ, ಕಳಿ ಚಂದ್ರಯ್ಯ ಆಚಾರ್ಯ,ಹರೀಶ್ ಆಚಾರ್ಯ, ಲೋಕೇಶ್ ಎಮ್ ಬಿ. ಆಚಾರ್ ಸೇರಿದಂತೆ ಹಲವು ಮಂದಿ ಗಣ್ಯರು ಭಾಗವಹಿಸಿದ್ದರು.

ಈ ಸಂದರ್ಭ ನೂತನವಾಗಿ ಚುನಾಯಿತರಾದ ಗ್ರಾಮ ಪಂಚಾಯಿತಿ ಸದಸ್ಯರನ್ನು ಅಭಿನಂದಿಸಲಾಯಿತು.

Edited By : Manjunath H D
Kshetra Samachara

Kshetra Samachara

29/01/2021 10:39 am

Cinque Terre

20.36 K

Cinque Terre

0

ಸಂಬಂಧಿತ ಸುದ್ದಿ