ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹೊಕ್ಕಾಡಿಗೋಳಿ: ಜಿಲ್ಲೆಯ ಪ್ರಥಮ ಕಂಬಳ 'ವೀರ-ವಿಕ್ರಮ' ಜೋಡುಕರೆ ಬಯಲು ಕಂಬಳಕ್ಕೆ ಸಂಭ್ರಮದ ಚಾಲನೆ

ಬಂಟ್ವಾಳ: ಜಿಲ್ಲೆಯಲ್ಲಿ ಹಲವು ವರ್ಷಗಳ ಇತಿಹಾಸ ಹೊಂದಿರುವ ಹೊಕ್ಕಾಡಿಗೋಳಿ ' ವೀರ-ವಿಕ್ರಮ' ಜೋಡುಕರೆ ಕಂಬಳಕ್ಕೆ ಧಾರ್ಮಿಕವಾಗಿ ವಿಶೇಷ ನಂಟು ಮತ್ತು ದೈವ ದೇವರ ಕೃಪೆಯೂ ಇದೆ ಎಂದು ಪೂಂಜ ಕ್ಷೇತ್ರದ ಅಸ್ರಣ್ಣ ಕೃಷ್ಣಪ್ರಸಾದ್ ಆಚಾರ್ಯ ಹೇಳಿದ್ದಾರೆ.ಇಲ್ಲಿನ ಸಿದ್ದಕಟ್ಟೆ ಸಮೀಪದ ಹೊಕ್ಕಾಡಿಗೋಳಿ ಇತಿಹಾಸ ಪ್ರಸಿದ್ದ 'ವೀರ -ವಿಕ್ರಮ' ಜೋಡುಕರೆ ಬಯಲು ಕಂಬಳಕ್ಕೆ ಶನಿವಾರ ಬೆಳಿಗ್ಗೆ ಚಾಲನೆ ನೀಡಿ ಅವರು ಮಾತನಾಡಿದರು.

ಕಂಬಳ ಸಮಿತಿ ಅಧ್ಯಕ್ಷ ನೋಣಾಲ್ ಗುತ್ತು ರಶ್ಮಿತ್ ಶೆಟ್ಟಿ ಕೈತ್ರೋಡಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.ಸ್ಥಳೀಯ ವೈದ್ಯ ಡಾ.ಸುದೀಪ್ ಕುಮಾರ್ ಜೈನ್ ಮಾತನಾಡಿ, ಕಂಬಳ ಕ್ರೀಡೆಯು ತುಳುನಾಡಿನ ಸಂಸ್ಕೃತಿ ಮೆರೆಯುತ್ತಿದೆ ಎಂದರು.ಎಪಿಎಂಸಿ ಮಾಜಿ ನಿರ್ದೇಶಕ ರತ್ನಕುಮಾರ್ ಚೌಟ, ಹೊಸಂಗಡಿ ತಾ.ಪಂ.ಸದಸ್ಯ ಓಬಯ, ಆರಂಬೋಡಿ ಗ್ರಾ.ಪಂ.ಅಧ್ಯಕ್ಷ ಪ್ರಭಾಕರ ಹುಲಿಮೇರು, ಜಿಲ್ಲಾ ಕಂಬಳ ಸಮಿತಿ ಪ್ರಧಾನ ಕಾರ್ಯದರ್ಶಿ ಎಡ್ತೂರು ರಾಜೀವ ಶೆಟ್ಟಿ, ಕಂಬಳ ಸಮಿತಿ ಗೌರವಾಧ್ಯಕ್ಷ ಸಂಜೀವ ಶೆಟ್ಟಿ ಗುಂಡ್ಯಾರು, ಗೌರವ ಸಲಹೆಗಾರರಾದ ವಕೀಲ ಸುರೇಶ ಶೆಟ್ಟಿ, ಬಾಬು ರಾಜೇಂದ್ರ ಶೆಟ್ಟಿ ಅಜ್ಜಾಡಿ, ಕಿರಣ್ ಕುಮಾರ್ ಮಂಜಿಲ, ಪ್ರಧಾನ ಕಾರ್ಯದರ್ಶಿ ಸಂದೇಶ ಶೆಟ್ಟಿ ಪೊಡುಂಬ, ಕಾರ್ಯದರ್ಶಿ ಪುಷ್ಪರಾಜ ಜೈನ್, ಕೋಶಾಧಿಕಾರಿ ಎಚ್.ಹರೀಶ ಹಿಂಗಾಣಿ, ಸಂಘಟನಾ ಕಾರ್ಯದರ್ಶಿ ಹರಿಪ್ರಸಾದ್ ಶೆಟ್ಟಿ ಕುರುಡಾಡಿ, ಸಂಚಾಲಕರಾದ ರಾಜೇಶ ಶೆಟ್ಟಿ ಕೊನೆರೊಟ್ಟು, ರಾಘವೇಂದ್ರ ಭಟ್ ಹೊಕ್ಕಾಡಿಗೋಳಿ, ಜನಾರ್ಧನ ಬಂಗೇರ ತಿಮರಡ್ಕ, ನಿತ್ಯಾನಂದ ಪೂಜಾರಿ ಕೆಂತಲೆ, ಸ್ಥಳದಾನಿಗಳಾದ ಸುಧೀರ್ ಶೆಟ್ಟಿ , ಸುಧಾಕರ ಚೌಟ ಬಾವ, ಗುಮ್ಮಣ್ಣ ಶೆಟ್ಟಿ, ಪ್ರವೀಣ ಕುಲಾಲ್, ಹರೀಶ ಶೆಟ್ಟಿ, ಸುಂದರ ಪೂಜಾರಿ ಮತ್ತಿತರರು ಇದ್ದರು.

ಕಂಬಳ ಸಮಿತಿ ಗೌರವ ಸಲಹೆಗಾರ ಸುರೇಶ ಶೆಟ್ಟಿ ಸ್ವಾಗತಿಸಿ, ವಂದಿಸಿದರು. ಪ್ರಚಾರ ಸಮಿತಿ ಸಂಚಾಲಕ ಮೋಹನ್ ಕೆ.ಶ್ರೀಯಾನ್ ರಾಯಿ ಕಾರ್ಯಕ್ರಮ ನಿರೂಪಿಸಿದರು.

Edited By : Manjunath H D
Kshetra Samachara

Kshetra Samachara

30/01/2021 02:03 pm

Cinque Terre

13.05 K

Cinque Terre

1

ಸಂಬಂಧಿತ ಸುದ್ದಿ