ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕಿನ್ನಿಗೋಳಿ: "ಐಕಳೋತ್ಸವ" ಜಾನಪದ ಕ್ರೀಡಾಕೂಟ ಉದ್ಘಾಟನೆ

ಮುಲ್ಕಿ: ಐಕಳಬಾವ ಕಾಂತಬಾರೆ ಬೂದಬಾರೆ ಜೋಡುಕರೆ ಕಂಬಳ ಸಮಿತಿ ಐಕಳೋತ್ಸವ, ಐಕಳ ವತಿಯಿಂದ ತುಳು ಜಾನಪದ ಕ್ರೀಡಾಕೂಟ "ಐಕಳೋತ್ಸವ" ವನ್ನು ಬಂಟರ ಸಂಘದ ಅಧ್ಯಕ್ಷ ಸಂತೋಷ್ ಕುಮಾರ್ ಹೆಗ್ಡೆ ಉದ್ಘಾಟಿಸಿದರು.

ಬಳಿಕ ಅವರು ಮಾತನಾಡಿ, ಇಂದಿನ ಯುವ ಜನಾಂಗ ಜಾನಪದ ಕ್ರೀಡೆಗಳಿಗೆ ಪ್ರೋತ್ಸಾಹ ನೀಡುವುದರ ಜೊತೆಗೆ ಮಹತ್ವ ತಿಳಿಸಿಕೊಡುವ ಕೆಲಸವಾಗಬೇಕು ಎಂದರು. ಏಳಿಂಜೆ ಶ್ರೀ ಲಕ್ಷ್ಮಿ ಜನಾರ್ಧನ ಮಹಾಗಣಪತಿ ದೇವಸ್ಥಾನದ ಅರ್ಚಕ ಗಣೇಶ್ ಭಟ್ ಆಶೀರ್ವಚನ ನೀಡಿದರು.

ಅಧ್ಯಕ್ಷತೆ ವಹಿಸಿದ್ದ ಐಕಳ ಕಾಂತಬಾರೆ ಬೂದಬಾರೆ ಕಂಬಳ ಸಮಿತಿ ಅಧ್ಯಕ್ಷ ಐಕಳಬಾವ ಬೆಳಪು ದೇವಿಪ್ರಸಾದ ಶೆಟ್ಟಿ ಮಾತನಾಡಿ, ತುಳು ಜನಪದ ಕ್ರೀಡೆಗಳಿಗೆ ಸರಕಾರ ಪ್ರೋತ್ಸಾಹ ನೀಡುತ್ತಿರುವುದು ಶ್ಲಾಘನೀಯ. ಕೊರೊನಾ ದಿನಗಳಲ್ಲಿಯೂ ಸರಕಾರದ ನಿಯಮ ಪಾಲಿಸಿಕೊಂಡು ಕಂಬಳ ನಡೆಸುವುದರ ಜೊತೆಗೆ ಜನಪದ ಕ್ರೀಡೆಗಳಿಗೆ ಯುವಕರು ಪ್ರೋತ್ಸಾಹ ನೀಡಬೇಕು ಎಂದರು.

ಮುಖ್ಯ ಅತಿಥಿಗಳಾಗಿ ಐಕಳ ಗ್ರಾಪಂ ಮಾಜಿ ಅಧ್ಯಕ್ಷ ದಿವಾಕರ ಶೆಟ್ಟಿ , ಐಕಳ ಕಂಬಳ ಸಮಿತಿ ಕಾರ್ಯಾಧ್ಯಕ್ಷ ಚಿತ್ತರಂಜನ್ ಭಂಡಾರಿ, ಕೋಶಾಧಿಕಾರಿ ಪ್ರಕಾಶ್ ಶೆಟ್ಟಿ ಪಡುಹಿತ್ಲು, ಸ್ವರಾಜ್ ಶೆಟ್ಟಿ ಮುಂಡ್ಕೂರು ದೊಡ್ಡಮನೆ, ಹರೀಶ್ ಶೆಟ್ಟಿ ತಾಮಣಿಗುತ್ತು, ಕೃಷ್ಣ ಮಾರ್ಲ ಮತ್ತಿತರರು ಉಪಸ್ಥಿತರಿದ್ದರು. ಶ್ರೀಶ ಸರಾಫ್ ಐಕಳ ನಿರೂಪಿಸಿದರು. ಬಳಿಕ ತುಳು ಜಾನಪದ ಕ್ರೀಡಾಕೂಟ "ಐಕಳೋತ್ಸವ" ನಡೆಯಿತು.

Edited By : Nagesh Gaonkar
Kshetra Samachara

Kshetra Samachara

31/01/2021 08:35 pm

Cinque Terre

12.79 K

Cinque Terre

0

ಸಂಬಂಧಿತ ಸುದ್ದಿ