ಮಂಗಳೂರು: ಮಂಗಳೂರು ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನ ಫೆ.9ರಂದು ಪಣಂಬೂರಿನ ಶ್ರೀ ನಂದನೇಶ್ವರ ದೇವಸ್ಥಾನದ ನಟರಾಜ ರಂಗ ಸಂಗಮ ವೇದಿಕೆಯಲ್ಲಿ ನಡೆಯಲಿದೆ.
ಹಿರಿಯ ವಿದ್ವಾಂಸ, ಯಕ್ಷಗಾನ ಪ್ರಸಂಗಕರ್ತ ಪೊಳಲಿ ನಿತ್ಯಾನಂದ ಕಾರಂತ ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ದ.ಕ. ಜಿಲ್ಲಾ ಕಸಾಪ ಅಧ್ಯಕ್ಷ ಪ್ರದೀಪ್ ಕುಮಾರ್ ಕಲ್ಕೂರ ಹೇಳಿದರು.
ನಗರದ ಪ್ರೆಸ್ ಕ್ಲಬ್ ನಲ್ಲಿ ಮಾತನಾಡಿದ ಅವರು, ಅಂದು ಬೆಳಗ್ಗೆ 8.30ಕ್ಕೆ ಕನ್ನಡ ಭುವನೇಶ್ವರಿಯ ಮೆರವಣಿಗೆ ಮೂಲಕ ಸಮ್ಮೇಳನ ಆರಂಭವಾಗಲಿದ್ದು, ಮೇಯರ್ ಧ್ವಜಾರೋಹಣ ನಡೆಸಲಿದ್ದಾರೆ ಎಂದು ಹೇಳಿದರು.
ಎಂಆರ್ ಪಿಎಲ್ ಸಂಸ್ಥೆಯ ಸಿಆರ್ ಎಸ್ ಉಪಮಹಾಪ್ರಬಂಧಕಿ ವೀಣಾ ಶೆಟ್ಟಿ ಬೆಳಗ್ಗೆ 9.30ಕ್ಕೆ ಉದ್ಘಾಟಿಸಲಿದ್ದಾರೆ. ಶಾಸಕ ಡಾ.ವೈ.ಭರತ್ ಶೆಟ್ಟಿ ಪುಸ್ತಕ ಪ್ರದರ್ಶನ ಉದ್ಘಾಟನೆ ಮಾಡಲಿದ್ದಾರೆ. ಈ ಸಂದರ್ಭ ಪರಿಸರ, ಸಾಹಿತ್ಯ, ಯಕ್ಷಗಾನಗಳ ನೂತನ ಆಯಾಮ ಎಂಬ ವಿಚಾರದ ಬಗ್ಗೆ ಗೋಷ್ಠಿ ನಡೆಯಲಿದೆ. ಬಳಿಕ ಕವಿಗೋಷ್ಠಿ ನಡೆಯಲಿದ್ದು, ಮಧ್ಯಾಹ್ನ 2.45ಕ್ಕೆ ಸಮಾರೋಪ ಸಮಾರಂಭ ನಡೆಯಲಿದೆ. ಈ ಸಂದರ್ಭ ಸನ್ಮಾನ ಕಾರ್ಯಕ್ರಮ ನೆರವೇರಲಿದೆ ಎಂದು ಪ್ರದೀಪ್ ಕುಮಾರ್ ಕಲ್ಕೂರ ಹೇಳಿದರು.
Kshetra Samachara
05/02/2021 01:05 pm