ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮಂಗಳೂರು: ಫೆ.10-15ರ ತನಕ ರಾಗಸುಧಾರಸ ರಾಷ್ಟ್ರೀಯ ಸಂಗೀತೋತ್ಸವ

ಮಂಗಳೂರು: ಮಣಿ ಕೃಷ್ಣಸ್ವಾಮಿ ಅಕಾಡೆಮಿಯ ವತಿಯಿಂದ ಪ್ರತೀ ವರ್ಷದಂತೆ ನಡೆಯುವ ರಾಗಸುಧಾರಸ ರಾಷ್ಟ್ರೀಯ ಸಂಗೀತೋತ್ಸವ ಫೆ.10-15ರ ತನಕ ನಡೆಯಲಿದೆ ಎಂದು‌ ಮಣಿ ಕೃಷ್ಣಸ್ವಾಮಿ ಅಕಾಡೆಮಿಯ ಕಾರ್ಯದರ್ಶಿ ಪಿ.ನಿತ್ಯಾನಂದ ರಾವ್ ಹೇಳಿದರು.

ನಗರದ ಪ್ರೆಸ್ ಕ್ಲಬ್ ನಲ್ಲಿ ಮಾತನಾಡಿದ ಅವರು, ಈ ಬಾರಿ ಪೇಜಾವರ ಶ್ರೀ ವಿಶ್ವೇಶ ತೀರ್ಥ ಪುಣ್ಯ ಸ್ಮರಣಾರ್ಥ ನಡೆಯುವ ಈ ಕಾರ್ಯಕ್ರಮ ಫೆ.10ರಂದು ನಗರದ ಶಾರದಾ ವಿದ್ಯಾಲಯದ ಧ್ಯಾನ ಮಂದಿರದಲ್ಲಿ ಉದ್ಘಾಟನೆ ನಡೆಯಲಿದೆ. ಮಂಗಳೂರಿನ ಶರವು ಶ್ರೀ ಮಹಾಗಣಪತಿ ದೇವಸ್ಥಾನದ ಆಡಳಿತ ಮೊಕ್ತೇಸರ ರಾಘವೇಂದ್ರ ಶಾಸ್ತ್ರಿ ಉದ್ಘಾಟಿಸಲಿದ್ದಾರೆ. ಪೇಜಾವರ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಆಶೀರ್ವಚನ ನೀಡಲಿದ್ದಾರೆ ಎಂದರು.

ಫೆ.10-13ರ ವರೆಗೆ ಶಾರದಾ ವಿದ್ಯಾಲಯದ ಧ್ಯಾನ ಮಂದಿರದಲ್ಲಿ ವೈವಿಧ್ಯಮಯ ಸಂಗೀತ ಕಾರ್ಯಕ್ರಮಗಳು ನಡೆದರೆ, ಫೆ.14ರಂದು ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರ ಬೀಡಿನಲ್ಲಿ ಹಾಗೂ ಪುತ್ತೂರಿನ ಬಹುವಚನಂನ ಪದ್ಮಿನಿ ಸಭಾಭವನದಲ್ಲಿ ಕಾರ್ಯಕ್ರಮ ನಡೆಯಲಿದೆ. ಫೆ.15 ರಂದು ಸುರತ್ಕಲ್ ನ ಅನುಪಲ್ಲವಿಯಲ್ಲಿ ಕಾರ್ಯಕ್ರಮ ನಡೆಯಲಿದೆ ಎಂದು ಪಿ.ನಿತ್ಯಾನಂದ ರಾವ್ ಹೇಳಿದರು.

Edited By : Manjunath H D
Kshetra Samachara

Kshetra Samachara

06/02/2021 08:30 pm

Cinque Terre

18.33 K

Cinque Terre

0

ಸಂಬಂಧಿತ ಸುದ್ದಿ