ಉಡುಪಿ: ರಾಜ್ಯದ ಪ್ರತಿಷ್ಠಿತ ನಾಟಕ ಸಂಸ್ಥೆಗಳಲ್ಲಿ ಒಂದಾದ ರಂಗಭೂಮಿ ಉಡುಪಿ ಸಂಸ್ಥೆ 1967 ರಿಂದ ಕಲೆ, ಸಂಸ್ಕೃತಿ, ಸಾಹಿತ್ಯ, ನಾಟಕರಂಗದಲ್ಲಿ ಅಭೂತಪೂರ್ವ ಸೇವೆ ಸಲ್ಲಿಸಿದವರಿಗೆ ರಂಗಭೂಮಿ ಪ್ರಶಸ್ತಿ ನೀಡಿ ಗೌರವಿಸುತ್ತಾ ಬರುತ್ತಿದೆ.
ಈ ಬಾರಿ ರಂಗಭೂಮಿ ಪುರಸ್ಕಾರಕ್ಕೆ ರಾಷ್ಟ್ರೀಯ ನಾಟಕ ಶಾಲೆಯ ಪದವೀಧರೆ, ಕೇಂದ್ರ ಸಂಗೀತ ನಾಟಕ ಅಕಾಡೆಮಿ ಪುರಸ್ಕಾರ ಮತ್ತು ದೇಶದ ಅತ್ಯುನ್ನತ ಪುರಸ್ಕಾರ ಗಳಲ್ಲಿ ಒಂದಾದ ಪದ್ಮಶ್ರೀ ಪುರಸ್ಕಾರಕ್ಕೆ ಭಾಜನರಾದ ಮಾಜಿ ರಾಜ್ಯಸಭೆ ಸದಸ್ಯರಾದ ಬಿ.ಜಯಶ್ರೀ ಅವರನ್ನು ಆಯ್ಕೆ ಮಾಡಲಾಗಿದೆ.
ಪ್ರಶಸ್ತಿ ಪ್ರದಾನ ಗಣ್ಯರ ಉಪಸ್ಥಿತಿಯಲ್ಲಿ ಎಂಜಿಎಂ ಕಾಲೇಜಿನ ಮುದ್ದಣ್ಣ ಬಯಲು ರಂಗಮಂದಿರದಲ್ಲಿ
ಫೆ. 13, 14ರಂದು ನಡೆಯಲಿದೆ ಎಂದು ರಂಗಭೂಮಿ ಅಧ್ಯಕ್ಷರಾದ ಡಾ. ತಲ್ಲೂರು ಶಿವರಾಮ ಶೆಟ್ಟಿ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.
ಉಪಾಧ್ಯಕ್ಷರಾದ ನಂದಕುಮಾರ್, ಭಾಸ್ಕರ್ ರಾವ್ ಕಿದಿಯೂರು, ಶ್ರೀಪಾದ ಹೆಗಡೆ, ಆನಂದ ಮೇಲಂಟ ಮತ್ತಿತರರು ಉಪಸ್ಥಿತರಿದ್ದರು.
Kshetra Samachara
10/02/2021 11:24 am