ಮುಲ್ಕಿ: ಮುಲ್ಕಿ ಸಮೀಪದ ಕುಬೆವೂರು ಶ್ರೀ ಜಾರಂದಾಯ ಸೇವಾ ಮಿತ್ರಮಂಡಳಿ ಹಾಗೂ ಮಹಿಳಾ ಮಂಡಳಿ ವತಿಯಿಂದ ಭಜನಾ ಮಂಗಲೋತ್ಸವ ಕುಬೆವೂರು ಶ್ರೀ ಜಾರಂದಾಯ ದೈವಸ್ಥಾನದಲ್ಲಿ ನಡೆಯಿತು.
ಅರ್ಚಕ ಶಿಮಂತೂರು ವೇದವ್ಯಾಸ ಭಟ್ ದೀಪ ಪ್ರಜ್ವಲನೆ ಮೂಲಕ ಚಾಲನೆ ನೀಡಿ ಮಾತನಾಡಿ, ಭಜನೆ,- ಸಂಕೀರ್ತನೆ ಮೂಲಕ ದೈವಸ್ಥಾನದ ಸಾನಿಧ್ಯ ವೃದ್ಧಿಯಾಗುವುದಲ್ಲದೆ, ಸುಸಂಸ್ಕೃತ ಸಮಾಜದ ನಿರ್ಮಾಣ ಸಾಧ್ಯ ಎಂದರು.
ಅರ್ಚಕ ಶೇಖರ ಪೂಜಾರಿ, ಶ್ರೀ ಜಾರಂದಾಯ ಸೇವಾ ಮಿತ್ರ ಮಂಡಳಿ ಅಧ್ಯಕ್ಷ ಪ್ರಕಾಶ್ ಶೆಟ್ಟಿ, ಗೌರವಾಧ್ಯಕ್ಷ ವಿಜಯಕುಮಾರ್ ಕುಬೆವೂರು , ಸಲಹೆಗಾರ ಕೃಷ್ಣಶೆಟ್ಟಿ, ಸುಂದರ ಶೆಟ್ಟಿ, ದಿವಾಕರ ಶೆಟ್ಟಿ, ಮಹಿಳಾ ಮಂಡಳಿ ಅಧ್ಯಕ್ಷೆ ಬಬಿತಾ ಶೆಟ್ಟಿ, ಮಾಜಿ ಅಧ್ಯಕ್ಷ ಜಯ ಕುಮಾರ್, ಚಂದ್ರಶೇಖರ ಶೆಟ್ಟಿ, ಗಣೇಶ್ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು. ಬಳಿಕ ವಿವಿಧ ಭಜನಾ ಮಂಡಳಿಗಳಿಂದ ಭಜನಾ ಮಂಗಲೋತ್ಸವ ನಡೆಯಿತು.
Kshetra Samachara
12/02/2021 12:18 pm