ಬಂಟ್ವಾಳ: ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬೆಂಗಳೂರು ಮತ್ತು ಚಿಣ್ಣರ ಲೋಕ ಮೋಕೆದ ಕಲಾವಿದೆರ್ ಸೇವಾ ಟ್ರಸ್ಟ್ ಬಂಟ್ವಾಳ ಸಂಯುಕ್ತ ಆಶ್ರಯದಲ್ಲಿ ಬಂಟ್ವಾಳದಲ್ಲಿ ನಡೆಯುತ್ತಿರುವ ಕೃಷಿ ಉತ್ಸವ- ಕರಾವಳಿ ಕಲೋತ್ಸವದಲ್ಲಿ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ, ಲಿಮ್ಕಾ ದಾಖಲೆಯ ಮುಂಬೈ ಕಲಾ ಜಗತ್ತು ಸಂಚಾಲಕ, ಚಿತ್ರನಟ- ನಿರ್ಮಾಪಕ- ನಿರ್ದೇಶಕ ತೋನ್ಸೆ ವಿಜಯ ಕುಮಾರ್ ಶೆಟ್ಟಿ ಯರಿಗೆ ಕರಾವಳಿ ಕಲಾ ಸೌರಭ ರಾಜ್ಯ ಪ್ರಶಸ್ತಿ ನೀಡಲಾಯಿತು.
ಮತ್ತು ಸಂಗೀತ ಕ್ಷೇತ್ರದಲ್ಲಿ ವಿಶಿಷ್ಟ ಸಾಧನೆ ಮಾಡಿದ ಕು.ದಿಯಾ ರಾವ್ ಕುಂಬ್ಳೆ ಅವರಿಗೆ ಚಿಣ್ಣರ ಸೌರಭ ರಾಜ್ಯ ಪ್ರಶಸ್ತಿ ಪ್ರದಾನ ಮಾಡಲಾಯಿತು.
ಈ ಸಂದರ್ಭ ಮಾಜಿ ಸಚಿವ ರಮಾನಾಥ ರೈ, ಡಾ.ಮೋಹನ್ ಆಳ್ವ ಸೇರಿದಂತೆ ಹಲವು ಮಂದಿ ಗಣ್ಯರು ಉಪಸ್ಥಿತರಿದ್ದರು.
Kshetra Samachara
12/02/2021 01:59 pm