ಮಂಗಳೂರು: ಪುಲ್ವಾಮ ದಾಳಿ ನಡೆದು ಎರಡು ವರ್ಷ ಆಗಿರುವ ಹಿನ್ನೆಲೆಯಲ್ಲಿ ನಗರದ ಕದ್ರಿಯ ಸರ್ಕ್ಯೂಟ್ ಹೌಸ್ ನಲ್ಲಿನ ಹುತಾತ್ಮರ ಸ್ಮಾರಕದಲ್ಲಿ ದ.ಕ. ಜಿಲ್ಲಾ ಬಿಜೆಪಿ ವತಿಯಿಂದ ಬಲಿದಾನಗೈದಿರುವ ಹುತಾತ್ಮರಿಗೆ ಶ್ರದ್ಧಾಂಜಲಿ ಅರ್ಪಿಸಲಾಯಿತು.
ಸಂಸದ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಶಾಸಕ ವೇದವ್ಯಾಸ ಕಾಮತ್ ಅವರು ಹುತಾತ್ಮರಿಗೆ ಪುಷ್ಪನಮನ ಸಲ್ಲಿಸಿದರು.
ಈ ಸಂದರ್ಭ ಮೇಯರ್ ದಿವಾಕರ ಪಾಂಡೇಶ್ವರ, ಮನಪಾ ಸದಸ್ಯರಾದ ಕದ್ರಿ ಮನೋಹರ ಶೆಟ್ಟಿ, ಪೂರ್ಣಿಮಾ ಭಟ್, ಜಗದೀಶ್ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು.
Kshetra Samachara
14/02/2021 11:48 am