ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಧರ್ಮಸ್ಥಳ: ವಕೀಲರ ರಾಜ್ಯ ಮಟ್ಟದ ಸಾಂಸ್ಕೃತಿಕ ಸ್ಪರ್ಧೆ ಉತ್ಸವ್ ಆಮಂತ್ರಣ ಪತ್ರಿಕೆ ಬಿಡುಗಡೆ

ಉಡುಪಿ ವಕೀಲರ ಸಂಘವು ಮಾರ್ಚ್ ತಿಂಗಳ ತಾ. 13 ಮತ್ತು 14ರಂದು ವಕೀಲರಿಗಾಗಿ ಆಯೋಜಿಸಿರುವ ರಾಜ್ಯ ಮಟ್ಟದ ಸಾಂಸ್ಕ್ರತಿಕ ಸ್ಪರ್ಧಾಕೂಟ ಉತ್ಸವ್ ಇದರ ಆಮಂತ್ರಣ ಪತ್ರಿಕೆಯನ್ನು ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಪದ್ಮಶ್ರೀ ಡಾ.ಡಿ.ವೀರೇಂದ್ರ ಹೆಗ್ಗಡೆಯವರು ಇಂದು ಫೆಬ್ರವರಿ ತಾ. 18ರಂದು ಧರ್ಮಸ್ಥಳದ ಶ್ರೀ ಮಂಜುನಾಥೇಶ್ವರನ ಸನ್ನಿಧಿಯಲ್ಲಿ ಬಿಡುಗಡೆಗೊಳಿಸಿ, ಶುಭ ಹಾರೈಸಿದರು.

ಈ ಸಂಧರ್ಭದಲ್ಲಿ ಉಡುಪಿ ವಕೀಲರ ಸಂಘದ ಅಧ್ಯಕ್ಷ ಶ್ರೀ ದಿವಾಕರ ಎಂ. ಶೆಟ್ಟಿ, ಉಪಾಧ್ಯಕ್ಷ ಶ್ರೀ ಬಿ. ನಾಗರಾಜ, ಪ್ರಧಾನ ಕಾರ್ಯದರ್ಶಿ ಶ್ರೀ ರೆನೋಲ್ಡ್ ಪ್ರವೀಣ್ ಕುಮಾರ್, ಸಾಂಸ್ಕ್ರತಿಕ ಕಾರ್ಯದರ್ಶಿ ಶ್ರೀ ಎಚ್. ರಾಘವೇಂದ್ರ ಶೆಟ್ಟಿ ಮತ್ತು ಕಾರ್ಯಕಾರಿ ಸಮಿತಿ ಸದಸ್ಯರಾದ ಶ್ರೀ ಅಸದುಲ್ಲಾ ಕಟಪಾಡಿ ಹಾಗೂ ಶ್ರೀ ಆನಂದ ಮಡಿವಾಳ ಇವರು ಉಪಸ್ಥಿತರಿದ್ದರು.

Edited By : Nagaraj Tulugeri
Kshetra Samachara

Kshetra Samachara

18/02/2021 07:56 pm

Cinque Terre

18.22 K

Cinque Terre

0

ಸಂಬಂಧಿತ ಸುದ್ದಿ